DAKSHINA KANNADA
ಮುಂದಿನ 48 ಗಂಟೆಗಳಲ್ಲಿ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಿಡಿಲಿನೊಂದಿಗೆ ಭಾರಿ ಮಳೆ ಸಾಧ್ಯತೆ..!!
ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಮಳೆಯಾಟ ಮುಂದುವರಿದಿದ್ದು ಮುಂದಿನ 48 ಗಂಟೆಗಳಲ್ಲಿ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಧಾರವಾಡ, ಹಾವೇರಿ, ಕೊಪ್ಪಳ, ಯಾದಗಿರಿ, ಬೀದರ್, ಕೊಪ್ಪಳ, ಕಲಬುರಗಿ, ಬೀದರ್, ರಾಯಚೂರು ಜಿಲ್ಲೆಗಳಲ್ಲಿ ಗುಡುಗು ಸಿಡಿಲಿನೊಂದಿಗೆ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಇದೆ.
ಕೆಲವು ದಿನಗಳ ಹಿಂದಷ್ಟೇ ಅಬ್ಬರಿಸಿ ತಣ್ಣಗಾಗಿದ್ದ ಹಿಂಗಾರು ಮಳೆ, ಇದೀಗ ಮತ್ತೆ ಆರ್ಭಟಿಸಲು ಸಜ್ಜಾಗಿದೆ. ಮುಂದಿನ ಮೂರು ದಿನಗಳ ಕಾಲ ನವೆಂಬರ್ 16ರವರೆಗೆ ವಿವಿಧ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಆಗಲಿದೆ. ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಹಿನ್ನೆಲೆಯಲ್ಲಿ ‘ಹಳದಿ ಎಚ್ಚರಿಕೆ’ ನೀಡಲಾಗಿದೆ. ಈಗಾಗಲೇ ಮಳೆಗೆ ನದಿಗಳು, ಕೆರೆ ಕಟ್ಟೆಗಳು, ಜಲಾಶಯಗಳು ಭರ್ತಿಯಾಗಿವೆ. ಉತ್ತರ ಕರ್ನಾಟಕ ಸೇರಿದಂತೆ ವಿವಿಧೆಡೆ ಅತೀ ವೃಷ್ಟಿ ಉಂಟಾಗಿತ್ತು. ಬೆಳೆಗಳು ನಾಶವಾಗಿದ್ದವು. ಇದೀಗ ಮತ್ತೆ ಮಳೆ ಅಬ್ಬರಿಸಲು ಸಜ್ಜಾಗಿದೆ. ಮುಂದಿನ ಮೂರು ದಿನ ಈ ಕೆಳಗಿನ ಜಿಲ್ಲೆಗಳಲ್ಲಿ ಅತ್ಯಧಿಕ ಮಳೆ ಬರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಿಗೆ ಭಾರೀ ಮಳೆ ಆಗಲಿದೆ. ಕನಿಷ್ಠ 70 ರಿಂದ ಗರಿಷ್ಠ 110 ಮಿಲಿ ಮೀಟರ್ ಮಳೆ ಆಗುವ ಕಾರಣ ಹಿನ್ನೆಲೆ ಈ ಆರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ 48 ಗಂಟೆಗಳಲ್ಲಿ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಧಾರವಾಡ, ಹಾವೇರಿ, ಕೊಪ್ಪಳ, ಯಾದಗಿರಿ, ಬೀದರ್, ಕೊಪ್ಪಳ, ಕಲಬುರಗಿ, ಬೀದರ್, ರಾಯಚೂರು ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಮುನ್ಸೂಚನೆ ಇದೆ.