Connect with us

  KARNATAKA

  ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿ ‘ಮಂಗಳೂರು ರಥೋತ್ಸವ’..!

  ಮಂಗಳೂರು : ಮಂಗಳೂರು ನಗರದ  ರಥಬೀದಿಯಲ್ಲಿರುವ ಇತಿಹಾಸ ಪ್ರಸಿದ್ದ ಶ್ರೀ ವೆಂಕಟರಮಣ ದೇವಸ್ಥಾನದ ” ಮಂಗಳೂರು ರಥೋತ್ಸವ ” ಸಹಸ್ರಾರು ಭಜಕರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರಗಿತು .

   

  ಬ್ರಹ್ಮರಥೋತ್ಸವ ಪ್ರಯುಕ್ತ ಬೆಳಿಗ್ಗೆ ಮಹಾಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡು ಶ್ರೀ ದೇವರಿಗೆ ಶತಕಲಶಾಭಿಷೇಕ , ಗಂಗಾಭಿಷೇಕ , ಪುಳಕಾಭಿಷೇಕ ಕಾಶಿ ಮಠ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಹಸ್ತಗಳಿಂದ ನೆರವೇರಿತು . ಯಜ್ಞಮಂಟಪದಲ್ಲಿ ಮಹಾಯಜ್ಞ ಮಹಾ ಪೂರ್ಣಾಹುತಿ ಬಳಿಕ ಶ್ರೀ ದೇವರು ಸ್ವರ್ಣ ಪಲ್ಲಕಿಯಲ್ಲಿ ವಿರಾಜಮಾನರಾಗಿ ಭವ್ಯ ಬ್ರಹ್ಮರಥದಲ್ಲಿ ರಥಾರೂಢರಾಗಿ ಮಂಗಳೂರು ರಥೋತ್ಸವ ನೆರವೇರಿತು . ದೇಶ ವಿದೇಶಗಳಿಂದ ಗೌಡ ಸಾರಸ್ವತ ಸಮಾಜದ ಸಹಸ್ರಾರು ಪಾಲ್ಗೊಂಡು ಪುನೀತರಾದರು .
  ಚಿತ್ರ : ಮಂಜು ನೀರೇಶ್ವಾಲ್ಯ

  Share Information
  Advertisement
  Click to comment

  You must be logged in to post a comment Login

  Leave a Reply