LATEST NEWS
ಉಡುಪಿ – ಇಸ್ಲಾಂಗೆ ಮತಾಂತರವಾಗುವಂತೆ ಗೆಳತಿಗೆ ಕಿರುಕುಳ – ವೈದ್ಯಕೀಯ ವಿಧ್ಯಾರ್ಥಿ ಅರೆಸ್ಟ್
ಉಡುಪಿ ಸೆಪ್ಟೆಂಬರ್ 03: ಗೆಳತಿಯನ್ನು ಇಸ್ಲಾಂ ಧರ್ಮಕ್ಕೆ ಮತಾಂತರಾವಗುವಂತೆ ಒತ್ತಾಯಿಸಿ, ರಾಮಮಂದಿರ, ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ವೈದ್ಯಕೀಯ ವಿಧ್ಯಾರ್ಥಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬಂಧಿತನನ್ನು 27 ವರ್ಷದ ಮಹಮ್ಮದ್ ಡ್ಯಾನಿಷ್ ಖಾನ್ ಎಂದು ಗುರುತಿಸಲಾಗಿದ್ದು ಆತನ ವಿರುದ್ಧ ಉಡುಪಿ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೆಹಲಿ ಮೂಲದ ಡ್ಯಾನಿಶ್ ಖಾನ್ ಪ್ರತಿಷ್ಠಿತ ವಿಶ್ವವಿದ್ಯಾನಿಲಯದಿಂದ ಮೆಡಿಕಲ್ ನಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿದ್ದನು. ಅಲ್ಲಿ ಅವನು ತನ್ನ ಸಹಪಾಠಿಯೊಂದಿಗೆ ಸ್ನೇಹ ಬೆಳೆಸಿದ್ದಾರೆ. ಇಬ್ಬರು ಪ್ರೀತಿಸಲು ಪ್ರಾರಂಭಿಸಿದ್ದು, ಇನ್ನೇನು ಮದುವೆಯ ಮಾತುಕತೆಯ ಹಂತಕ್ಕೆ ತಲುಪಿತ್ತು. ಡ್ಯಾನಿಶ್ ಖಾನ್ ದಿನ ಕಳೆದಂತೆ ನೀನು ಇಸ್ಲಾಂಗೆ ಮತಾಂತರ ಆಗಬೇಕು, ಕುರಾನ್ ಓದಬೇಕು ಎಂದು ತಾಕೀತು ಮಾಡುತ್ತಿದ್ದ. ಹಿಂದೂ ಧರ್ಮದ ಯಾವುದೇ ಆಚರಣೆಗಳನ್ನು ಮಾಡಬಾರದು, ದೇವರ ಆರಾಧನೆ ನಡೆಸಬಾರದು ಎಂಬಂತಹ ನಿಬಂಧನೆಗಳನ್ನು ಹಾಕಿದ್ದಾನೆ. ಅಷ್ಟೇ ಅಲ್ಲ, ದೈಹಿಕ ಹಲ್ಲೆ ನಡೆಸಿ, ಲೈಂಗಿಕ ಕಿರುಕುಳ ನೀಡಿದ್ದಾಗಿ ಯುವತಿ ದೂರಿನಲ್ಲಿ ಆರೋಪಿಸಿದ್ದಾಳೆ.
ಮದುವೆ ಪ್ರಸ್ತಾಪವನ್ನು ತಿರಸ್ಕರಿಸಿದ ಕೋಪದಲ್ಲಿ ಡ್ಯಾನಿಷ್ ಖಾನ್ ಗೆಳತಿಯ ಕಪಾಳಕ್ಕೆ ಹೊಡೆದಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೆ ತನ್ನ ದೇಹವನ್ನು ಮುಟ್ಟುವ ಮೂಲಕ ಅನುಚಿತವಾಗಿ ವರ್ತಿಸಿದ್ದಾನೆ. ಪದೇ ಪದೇ ವಿರೋಧಿಸಿದರೂ ಆರೋಪಿ ತನ್ನ ಖಾಸಗಿ ಅಂಗಗಳನ್ನು ಮುಟ್ಟಿದ್ದಾನೆ ಎಂದು ಪೊಲೀಸರಿಗೆ ತಿಳಿಸಿದ್ದಾಳೆ. ಆ ಘಟನೆಯ ನಂತರ ಡ್ಯಾನಿಶ್ ಖಾನ್ ತನಗೆ ಫೋನ್ ಮೂಲಕ ಕಿರುಕುಳ ನೀಡಲಾರಂಭಿಸಿದ್ದ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಕೊನೆಗೆ ಒತ್ತಡ ತಡೆದುಕೊಳ್ಳಲಾಗದೆ ಆಗಸ್ಟ್ 31ರಂದು ಪೊಲೀಸರಿಗೆ ದೂರು ನೀಡಿದ್ದಾಳೆ.
ಮಹಿಳೆ ನೀಡಿದ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಉಡುಪಿ ಮಹಿಳಾ ಪೊಲೀಸ್ ಠಾಣೆಯ ಸಿಬ್ಬಂದಿ ಬಂಧಿಸಿದ್ದಾರೆ. ಡ್ಯಾನಿಷ್ ಖಾನ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
You must be logged in to post a comment Login