Connect with us

    DAKSHINA KANNADA

    ಜ22 ರಂದು ಅಯೋಧ್ಯೆ ರಾಮ ಮಂದಿರ ಉದ್ಘಾಟನೆ, ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ..!

    ಬೆಂಗಳೂರು : ಅಯೋಧ್ಯೆಯಲ್ಲಿ ರಾಮ ಮಂದಿರ ಲೋಕಾರ್ಪಣೆಗೆ ದಿನಗಣನೆ ಆರಂಭವಾಗಿದ್ದು ಇಡೀ ರಾಜ್ಯದಲ್ಲಿ ಸಂಭ್ರಮ ಮುಗಿಲು ‌ ಮುಟ್ಟಿದೆ. ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲು ಪೊಲೀಸ್‌ ಇಲಾಖೆ ಸೂಚನೆ ನೀಡಿದೆ.

     

    ಜನವರಿ 16ರಿಂದಲೇ ಮಂದಿರ ಲೋಕಾರ್ಪಣೆ, ರಾಮ ಮೂರ್ತಿಗೆ ಪ್ರಾಣಪ್ರತಿಷ್ಠೆ ಮಾಡುವುದಕ್ಕೆ ಸಂಬಂಧಿಸಿ ಧಾರ್ಮಿಕ ವಿಧಿ ವಿಧಾನಗಳು ಆರಂಭಗೊಂಡಿವೆ. ಅದರ ನಡುವೆ ಇಡೀ ರಾಜ್ಯಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಲಾಗಿದೆ. ಬೆಂಗಳೂರು ನಗರ ಸೇರಿ ಎಲ್ಲಾ ಕಡೆಗಳಲ್ಲಿಯೂ ಜನವರಿ 22ರ ವರೆಗೂ ಹೈ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಎಲ್ಲಾ ಕಮೀಷನರೇಟ್ ಹಾಗೂ ಜಿಲ್ಲಾ ಎಸ್‌ಪಿಗಳಿಗೆ ಡಿಜಿ ಐಜಿಪಿ ಅಲೋಕ್ ಮೋಹನ್ ಅವರು ಕಟ್ಟೆಚ್ಚರದ ಸೂಚನೆ ನೀಡಿದ್ದಾರೆ. ಅದರಲ್ಲೂ ಮುಖ್ಯವಾಗಿ ಬೆಂಗಳೂರು, ಶಿವಮೊಗ್ಗ, ಮಂಗಳೂರು, ಚಿಕ್ಕಮಗಳೂರು, ಹುಬ್ಬಳ್ಳಿ ಮತ್ತು ಉಡುಪಿ ಸೇರಿ ಕೆಲ ಜಿಲ್ಲೆಗಳಲ್ಲಿ ಹೆಚ್ಚಿನ ನಿಗಾ ವಹಿಸುವಂತೆ ಸೂಚಿಸಲಾಗಿದೆ.
    ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಪ್ರದೇಶದಲ್ಲಿನ ದೇವಾಲಯಗಳ ಬಳಿ ಅಲರ್ಟ್ ಇರಬೇಕು. ಸೂಕ್ಷ್ಮ ಪ್ರದೇಶವೆನ್ನಿಸಿದರೆ ಕೆಎಸ್ ಆರ್ ಪಿ ನಿಯೋಜನೆ ಮಾಡಬೇಕು ಎಂದು ಸಲಹೆ ನೀಡಲಾಗಿದೆ.
    ಈ ನಡುವೆ, ರಾಮ ಮಂದಿರ ಉದ್ಘಾಟನೆ ಸಂದರ್ಭ ಊರೂರಿನ ದೇವಾಲಯಗಳಲ್ಲಿ ಪೂಜೆ ಮತ್ತಿತರ ಧಾರ್ಮಿಕ ಮತ್ತು ಸಭಾ ಕಾರ್ಯಕ್ರಮಗಳು ನಡೆಯಲಿವೆ. ಅದಕ್ಕೆ ಸಂಬಂಧಿಸಿಯೂ ಕೆಲವೊಂದು ಕಟ್ಟೆಚ್ಚರದ ಸೂಚನೆಗಳನ್ನು ನೀಡಲಾಗಿದೆ.

    1.ಪೂಜೆ ಪುನಸ್ಕಾರ ಹೊರತುಪಡಿಸಿ ಬೇರೆ ಯಾವುದೇ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡದಿರಲು ಸೂಚನೆ ನೀಡಲಾಗಿದೆ.

    2. ದೇವಸ್ಥಾನ ಬಳಿಯಲ್ಲಿ ರಾಜಕೀಯವಾಗಿ ಮಾತನಾಡುವುದು, ಪ್ರತಿಭಟನೆ ಮಾಡುವುದು, ಸಮಾಜದ ಶಾಂತಿ ಭಂಗ ಮಾಡುವ ಘೋಷಣೆ ಕೂಗುವುದನ್ನು ನಿಷೇಧಿಸಲಾಗಿದೆ. ಅದರ ಮೇಲೆ ಖಾಕಿ ಕಣ್ಣು ಇಡಲಿದೆ.

    3.ಇಷ್ಟೇ ಅಲ್ಲದೇ ಸಾಮಾಜಿಕ‌ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದರೆ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ. ಹೀಗಾಗಿ ಅವರು ಸಾಮಾಜಿಕ ಜಾಲ ತಾಣದ ಮೇಲೆ ಕಣ್ಣಿಡಲಿದ್ದಾರೆ.
    ಗುಪ್ತಚರ ಇಲಾಖೆಗಳು ಕೂಡಾ ಹೈ ಅಲರ್ಟ್‌
    ರಾಮ ಮಂದಿರ ಲೋಕಾರ್ಪಣೆಯ ಸಂದರ್ಭವನ್ನು ಕೆಲವೊಂದು ದುಷ್ಟ ಶಕ್ತಿಗಳು ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆ ಇರುವುದರಿಂದ ಅದರ ಬಗ್ಗೆಯೂ ರಾಜ್ಯಾದ್ಯಂತ ಅಲರ್ಟ್ ಇರಲು ಕೇಂದ್ರ ಗುಪ್ತಚರ ಇಲಾಖೆಗಳಿಗೆ ಸೂಚನೆ ನೀಡಲಾಗಿದೆ.

    ಕರ್ನಾಟಕದಲ್ಲಿ ಈಗಾಗಲೇ ಕೆಲವು ಉಗ್ರರು ಅರೆಸ್ಟ್ ಆಗಿದ್ದಾರೆ. ಇನ್ನೂ ಹಲವು ಸಂಘಟನೆಗಳು ಭೂಗತವಾಗಿ ಕೆಲಸ ಮಾಡಿಕೊಂಡಿವೆ. ಈ ಸಮಯವನ್ನೇ ಬಳಸಿಕೊಳ್ಳಲು ಪ್ಲ್ಯಾನ್‌ ಮಾಡುತ್ತಿರುತ್ತವೆ. ಹೀಗಾಗಿ ಎಲ್ಲಾ ಚಟುವಟಿಕೆಗಳ ಮೇಲೆ ನಿಗಾ ಇಡಲು ಡಿಜಿ ಐಜಿಪಿ ಸೂಚಿಸಿದ್ದಾರೆ. ಅದರ ಜತೆಗೆ ಜ 22.ರ ವರೆಗೂ ಪೊಲೀಸ್ ಅಧಿಕಾರಿಗಳು ಅವರ ಲಿಮಿಟ್ಸ್ ಬಿಟ್ಟು ಹೋಗದಂತೆಯೂ ಸೂಚನೆ ನೀಡಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply