DAKSHINA KANNADA
ರಾಮಮಂದಿರ ಉದ್ಘಾಟನೆ ಬಿಜೆಪಿಯ ಲೋಕಸಭಾ ಚುನಾವಣಾ ಗಿಮಿಕ್ :ಹಿಂದೂ ಮಹಾ ಸಭಾ ಆರೋಪ ..!

ಮಂಗಳೂರು : ಕೇಂದ್ರ ಸರಕಾರವು ಲೋಕಸಭೆ ಚುನಾವಣಾ ದೃಷ್ಟಿಯನ್ನಿಟ್ಟು ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮನ ಮಂದಿರವನ್ನು ಅಪೂರ್ಣವಸ್ಥೆಯಲ್ಲಿ ಉದ್ಘಾಟನೆ ಮಾಡುತ್ತಿದ್ದಾರೆ. ಇದು ಧರ್ಮಶಾಸಕ್ಕೆ ಬಿಜೆಪಿ ಮಾಡುವ ಅಪಚಾರವಾಗಿದೆ ಎಂದು ಹಿಂದೂ ಮಹಾಸಭಾ ಆರೋಪಿಸಿದೆ,
ಮಂಗಳೂರಿನಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಹಿಂದೂ ಮಹಾಸಭಾ ಕರ್ನಾಟಕದ ಸಂಸ್ಥಾಪಕ ರಾಜೇಶ್ ಪವಿತ್ರನ್ . ಅಯೋಧ್ಯೆಯಲ್ಲಿ ಶ್ರೀರಾಮನ ಮಂದಿರವನ್ನು ಅಪೂರ್ಣಾವಸ್ಥೆಯಲ್ಲಿರುವಾಗ ಉದ್ಘಾಟನೆ ಮಾಡುತ್ತಿರುವುದು ಧರ್ಮಶಾಸ್ತ್ರಕ್ಕೆ ಮಾಡಿದ ಅಪಚಾರವಾಗಿದೆ.ಬಿಜೆಪಿ ಶ್ರೀರಾಮನನ್ನು ಚುನಾವಣಾ ಸರಕನ್ನಾಗಿ ಮಾಡಿದ್ದೆ ಆದಲ್ಲಿ ಭಾರತೀಯ ಜನತಾ ಪಕ್ಷದ ನೇತೃತ್ವದ ಕೇಂದ್ರ ಸರಕಾರಕ್ಕೆ ಪ್ರಭು ಶ್ರೀರಾಮನ ಶಾಪ ತಟ್ಟಲಿದೆ. ಕರ್ನಾಟಕದಲ್ಲಿ ಆದ ಸ್ಥಿತಿಯೇ ಕೇಂದ್ರದಲ್ಲೂ ಆಗಬಹುದು’ ಎಂದು ಎಚ್ಚರಿಸಿದರು.ರಾಮ ಜನ್ಮಭೂಮಿಯ ಮೂಲ ವಕಾಲತ್ತುದಾರರು ಹಿಂದೂ ಮಹಾಸಭಾ ಆಗಿದ್ದು, ರಾಮಮಂದಿರ ಉದ್ಘಾಟನೆಗೆ ಹಿಂದೂ ಮಹಾಸಭಾ ಹಾಗೂ ನಿರ್ಮೂಯಿ ಅಖಾಡವನ್ನು ಆಹ್ವಾನಿಸಿಲ್ಲ. ಇದು ಕೇಂದ್ರ ಸರ್ಕಾರದ ಸ್ವಾರ್ಥ ರಾಜಕಾರಣವನ್ನು ತೋರಿಸುತ್ತದೆ’ ಎಂದು ಇದೇಸಂದರ್ಭದಲ್ಲಿ ಕೇಂದ್ರದ ವಿರುದ್ದ ಕಿಡಿಕಾರಿದರು ಹಿಂದೂ ಮಹಾಸಭಾ ಕರ್ನಾಟಕದ ರಾಜ್ಯಾಧ್ಯಕ್ಷ ಎಲ್.ಕೆ. ಸುವರ್ಣ, ಖಜಾಂಚಿ ಲೋಕೇಶ್ ಉಳ್ಳಾಲ್, ಹಿಮಾಂಶು ಶರ್ಮ, ಪ್ರವೀಣ ಚಂದ್ರ ರಾವ್ ಸುದ್ದಿಗೋಷ್ಟಿಯಲ್ಲಿದ್ದರು.
