LATEST NEWS
ಸತತ 56 ಗಂಟೆಗಳಿಂದ ಮುಳುಗಿರುವ ಹೊಸ್ಮಠ ಸೇತುವೆ
ಸತತ 56 ಗಂಟೆಗಳಿಂದ ಮುಳುಗಿರುವ ಹೊಸ್ಮಠ ಸೇತುವೆ
ಪುತ್ತೂರು ಜುಲೈ 13: ಘಟ್ಟ ಪ್ರದೇಶ ಮತ್ತು ಕುಕ್ಕೆ ಸುಬ್ರಹ್ಮಣ್ಯ, ಕಡಬ ಪರಿಸರದಲ್ಲಿ ಎಡಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಕುಮಾರಧಾರಾ ಮತ್ತು ಗುಂಡ್ಯ ನದಿಗಳು ತುಂಬಿ ಹರಿಯುತ್ತಿದ್ದು, ಸತತ 56 ಗಂಟೆಗಳಿಂದ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಸ್ತೆಯ ಹೊಸ್ಮಠ ಸೇತುವೆ ಮುಳುಗಡೆಯಾಗಿದೆ.
ನಿರಂತರ ಮಳೆಯಿಂದಾಗಿ ಉಪ್ಪಿನಂಗಡಿ- ಕಡಬ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಗುಂಡ್ಯ ಹೊಳೆಗೆ ಅಡ್ಡಲಾಗಿರುವ ಹೊಸ್ಮಠ ಮುಳುಗು ಸೇತುವೆ ಸಂಚಾರಕ್ಕೆ ಮುಕ್ತವಾಗಿಲ್ಲ. ಸ್ಥಳೀಯರು ಮುಳುಗು ಸೇತುವೆ ಪಕ್ಕದಲ್ಲಿ ನಿರ್ಮಾಣ ಹಂತದಲ್ಲಿರುವ ನೂತನ ಸೇತುವೆಯಲ್ಲಿ ಕಾಲ್ನಡಿಗೆಯಲ್ಲಿ ಸಂಚರಿಸುತ್ತಾರೆ.
ಸೇತುವೆಯ ಇಕ್ಕೆಲಗಳಲ್ಲಿ ರಕ್ಷಣಾ ಗೇಟು ಆಳಡಿಸಿಕ ಕಡಬ ಪೊಲೀಸರು ಹಾಗೂ ಗೃಹ ರಕ್ಷಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ.
ಕುಕ್ಕೆಯಲ್ಲಿ ನಾಲ್ಕು ದಿನಗಳಿಂದ ಸ್ನಾನಘಟ್ಟವು ಸಂಪೂರ್ಣ ಜಲಾವೃತಗೊಂಡಿದೆ. ಕುಮಾರಧಾರ ಹಳೆ ಸೇತುವೆ ನೀರಿನಲ್ಲಿ ಮುಳುಗಡೆಯಾಗಿದೆ.