DAKSHINA KANNADA
ದಕ್ಷಿಣ ಕನ್ನಡ ಸೇರಿ ಕರಾವಳಿಯಲ್ಲಿ ಇನ್ನೂ ನಾಲ್ಕು ದಿನ ಮಳೆ..!
ಬೆಂಗಳೂರು : ದಕ್ಷಿಣ ಕನ್ನಡ ಸೇರಿ ಕರಾವಳಿಯಲ್ಲಿ ಇನ್ನೂ ನಾಲ್ಕು ದಿನ ಮಳೆ (Rain Alert) ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಈಗಾಗಲೇ ರಾಜ್ಯದ ಕೆಲ ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಕರಾವಳಿ ಭಾಗದ ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಾಲ್ಕು ದಿನಗಳ ಮಳೆ ಮುಂದುವರೆಯಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಡುಪಿ ಜಿಲ್ಲೆಗೆ ಸೆ.4 ರಿಂದ ಸೆ.6ರವರೆಗೆ ಯೆಲ್ಲೋ ಅಲರ್ಟ್ ಉಳಿದಂತೆ ಉತ್ತರ ಒಳನಾಡಿನ ಬೀದರ್, ಕಲ್ಬುರ್ಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗೆ ಮುಂದಿನ 24 ಗಂಟೆಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಉಳಿದ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
You must be logged in to post a comment Login