LATEST NEWS
ಬಜೆಟ್ 2025 – ಆದಾಯ ತೆರಿಗೆ ವಿನಾಯಿತಿ 12 ಲಕ್ಷಕ್ಕೆ ಏರಿಕೆ

ನವದೆಹಲಿ ಫೆಬ್ರವರಿ 01: ಪ್ರಧಾನಿ ನರೇಂದ್ರಮೋದಿ ನೇತೃತ್ವದ ಕೇಂದ್ರ ಸರಕಾರ ಇದೀಗ ಮಧ್ಯಮ ವರ್ಗದವರಿಗೆ ಗುಡ್ ನ್ಯೂಸ್ ಕೊಟ್ಟಿದ್ದು, ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 12 ಲಕ್ಷಕ್ಕೇರಿಕೆ ಮಾಡಿದ್ದಾರೆ.
ಈ ಬಗ್ಗೆ ಸಂಸತ್ ಭವನದಲ್ಲಿ ನಡೆದ ಬಜೆಟ್ ಅಧಿವೇಶನದಲ್ಲಿ ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು ಏರಿಕೆ ಮಾಡಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಅಂದರೆ 12 ಲಕ್ಷ ರೂಪಾಯಿಗಳವರೆಗಿನ ಆದಾಯದ ಮೇಲೆ ಯಾವುದೇ ಆದಾಯ ತೆರಿಗೆ ಇರುವುದಿಲ್ಲ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಹೊಸ ತೆರಿಗೆ ಪದ್ಧತಿ ಅಡಿಯಲ್ಲಿ 12 ಲಕ್ಷ ರೂಪಾಯಿವರೆಗೂ ಆದಾಯ ತೆರಿಗೆ ಇಲ್ಲ. ಆದರೆ 4 ಲಕ್ಷದಿಂದ 8 ಲಕ್ಷದವರೆಗೆ ಶೇ.5ರಷ್ಟು ತೆರಿಗೆ ವಿಧಿಸಲಾಗಿದ್ದು, 8 ಲಕ್ಷದಿಂದ 11 ಲಕ್ಷದವರೆಗೆ ಶೇ.10ರಷ್ಟು ತೆರಿಗೆ ವಿಧಿಸಲಾಗಿದೆ. 12 ಲಕ್ಷದಿಂದ 15 ಲಕ್ಷದವರೆಗೆ ಶೇ.15ರಷ್ಟು ತೆರಿಗೆ ಮತ್ತು 15 ಲಕ್ಷದಿಂದ 20 ಲಕ್ಷದವರೆಗೆ ಶೇ.20ರಷ್ಟು ತೆರಿಗೆ 20 ಲಕ್ಷದಿಂದ 24 ಲಕ್ಷದರೆಗೆ ಶೇ.25ರಷ್ಟು ತೆರಿಗೆ 24 ಲಕ್ಷ ಮೇಲ್ಪಟ್ಟ ಆದಾಯಕ್ಕೆ ಶೇ.30ರಷ್ಟು ತೆರಿಗೆ ವಿಧಿಸಲಾಗಿದೆ ಎಂದು ವಿತ್ತ ಸಚಿವರು ಹೇಳಿದ್ದಾರೆ.
