DAKSHINA KANNADA
ಕರ್ನಾಟಕ ,ಕೇರಳದಲ್ಲಿ ಝೀಕಾ, ಹಂದಿ ಜ್ವರ ಸಾಂಕ್ರಾಮಿಕ ರೋಗ ಪ್ರಕರಣ ಹೆಚ್ಚಳ, ದಕ್ಷಿಣ ಕನ್ನಡದಲ್ಲಿ ತೀವ್ರ ಕಟ್ಟೆಚ್ಚರ..!
ಮಂಗಳೂರು : ಕರ್ನಾಟಕದಲ್ಲಿ ಮತ್ತು ನೆರೆಯ ಕೇರಳ ರಾಜ್ಯದಲ್ಲಿ ಸಾಂಕ್ರಾಮಿಕ ರೋಗ ಗಳ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ತೀವ್ರ ಕಟ್ಟೆಚ್ಚರವಹಿಸಲಾಗುತ್ತಿದೆ.
ಡಿಂಗಿ ಹಾವಳಿ, ಶಿವಮೊಗ್ಗದಲ್ಲಿ ಶಂಕಿತ ಝೀಕಾ ವೈರಸ್, ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಮತ್ತು ಹಂದಿ ಜ್ವರ ಪ್ರಕರಣಗಳು ಹೆಚ್ಚಾಗುತ್ತಿದೆ. ಈ ಪ್ರದೇಶಗಳಿಗೆ ದಕ್ಷಿಣ ಕನ್ನಡ ಜಿಲ್ಲೆಯ ನೇರಾ ಸಂಪರ್ಕವಿದೆ. ಆದ್ದರಿಂದ ಜಿಲ್ಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಜಿಲ್ಲಾ ರೋಗ್ಯ ಇಲಾಖೆ ಸಾಮೂಹಿಕ ತಪಾಸಣೆ ನಡೆಸಲು ಯೋಜನೆ ರೂಪಿಸಿದೆ. ಈಗಾಗಲೇ ಕರಾವಳಿಯಲ್ಲಿ ಕಿಲ್ಲರ್ ಡೆಂಗಿ ಪ್ರಕರಣಗಳು ಹೆಚ್ಚಾಗುತ್ತಿದೆ. ಜೊತೆಗೆ ಶಿವಮೊಗ್ಗದಲ್ಲಿ ಝೀಕಾ ವೈರಸ್ ಪ್ರಕರಣ ದಾಖಲಾಗಿದೆ. ಈಡೀಸ್ ಸೊಳ್ಳೆಯಿಂದ ಝೀಕಾ ಮತ್ತು ಡೆಂಗಿ ಕಾಯಿಲೆಗಳು ಬರುತ್ತಿದ್ದು ಇದರ ತಪಾಸಣೆ ಮತ್ತು ರೋಗ ತಡೆಗಟ್ಟಲು ಬೇಕಾದ ಮುಂಜಾಗೃತಾ ಕ್ರಮಗಳನ್ನು ಜಿಲ್ಲಾ ಆರೋ್ಗ್ಯ ಇಲಾಖೆ ಹಮ್ಮಿಕೊಂಡಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಹೆಚ್. ಆರ್ . ತಿಮ್ಮಯ್ಯ ಮಾಹಿತಿ ನೀಡಿದ್ದಾರೆ.