DAKSHINA KANNADA
ಭಾರಿ ಮಳೆ ಜಲಾವೃತವಾದ ಕುಮಾರಧಾರ ಸ್ನಾನಘಟ್ಟ

ಭಾರಿ ಮಳೆ ಜಲಾವೃತವಾದ ಕುಮಾರಧಾರ ಸ್ನಾನಘಟ್ಟ
ಸುಬ್ರಹ್ಮಣ್ಯ ಜೂನ್ 11:ಕರಾವಳಿಯಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ದಕ್ಷಿಣಕನ್ನಡ ಜಿಲ್ಲೆಯ ಪ್ರಮುಖ ನದಿಗಳು ತುಂಬಿ ಹರಿಯುತ್ತಿದೆ. ಪ್ರಖ್ಯಾತ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕುಮಾರಧಾರ ಸ್ನಾನ ಘಟ್ಟ ಸಂಪೂರ್ಣ ಜಲಾವೃತವಾಗಿದೆ.
ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಕುಮಾರಧಾರಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗುತ್ತಿದೆ. ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಕುಮಾರಧಾರಾ ಸ್ನಾನಘಟ್ಟ ಸಂಪೂರ್ಣ ಜಲಾವೃತಗೊಂಡಿದೆ. ಇದರಿಂದಾಗಿ ಕ್ಷೇತ್ರಕ್ಕೆ ಬಂದ ಭಕ್ತರಿಗೆ ಸ್ನಾನಘಟ್ಟದಲ್ಲಿ ಸ್ನಾನ ಮಾಡುವ ಅವಕಾಶ ಇಲ್ಲದಂತಾಗಿದೆ.

ಭಕ್ತಾಧಿಗಳು ಸ್ನಾನಘಟ್ಟದ ಹೊರೆಗೆ ಬಂದಂತಹ ನೀರಿನಲ್ಲೇ ತೀರ್ಥಸ್ನಾನವನ್ನು ಮಾಡುತ್ತಿದ್ದಾರೆ. ಉಪ್ಪಿನಂಗಡಿ -ಸುಬ್ರಹ್ಮಣ್ಯ ಸಂಪರ್ಕ ರಸ್ತೆಯ ಹೊಸ್ಮಠ ಸೇತುವೆಯೂ ನೀರಿನಿಂದ ಮುಳುಗಡೆಯಾಗಿದ್ದು, ಈ ರಸ್ತೆಯ ಮೂಲಕ ಸಂಚರಿಸುವ ಪ್ರಯಾಣಿಕರಿಗೆ ತೊಂದರೆಯಾಗಿದೆ. ದಕ್ಷಿಣಕನ್ನಡ ಜಿಲ್ಲೆಯ ಪ್ರಮುಖ ನದಿಗಳಾದ ನೇತ್ರಾವತಿ ಹಾಗೂ ಕುಮಾರಧಾರದಲ್ಲಿ ನೀರಿನ ಮಟ್ಟ ಹೆಚ್ಚುತ್ತಿದೆ.