Connect with us

    LATEST NEWS

    ಉಡುಪಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

    ಉಡುಪಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

    ಉಡುಪಿ, ಅಗಸ್ಟ್ 15 : ಉಡುಪಿ ಜಿಲ್ಲಾಡಳಿತ ವತಿಯಿಂದ , ಬೀಡಿನಗುಡ್ಡೆಯ ಮಹಾತ್ಮ ಗಾಂಧಿ ಬಯಲು ರಂಗ ಮಂದಿರದಲ್ಲಿ ಇಂದು ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ. ಜಯಮಾಲಾ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯೋತ್ಸವ ಸಂದೇಶ ನೀಡಿದರು.

    ಇದೇ ಸಂದರ್ಭದಲ್ಲಿ ಅರಣ್ಯ ಇಲಾಖೆವತಿಯಿಂದ ನಡೆದ ಹಸಿರು ಕರ್ನಾಟಕ ಆಂದೋಲನವನ್ನು ಸಚಿವರು ಉದ್ಘಾಟಿಸಿದರು.
    2017-18 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಸಚಿವರು ಸನ್ಮಾನಿಸಿದರು.

    ಕಾರ್ಯಕ್ರಮದಲ್ಲಿ ಉಡುಪಿ ಶಾಸಕ ರಘುಪತಿ ಭಟ್, ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಉಡುಪಿ ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಉಡುಪಿ ತಾಲೂಕು ಪಂಚಾಯತ್ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನಿಸ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ಬಿ ನಿಂಬರಗಿ, ಕುಂದಾಪುರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಭಾಕರನ್ , ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ , ಎಎಸ್ಪಿ ಕುಮಾರ ಚಂದ್ರ ಉಪಸ್ಥಿತರಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply