ಮಂಡ್ಯ ಲೋಕಸಭಾ ಚುನಾವಣೆ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಧರ್ಮಸ್ಥಳದಲ್ಲಿ

ಬೆಳ್ತಂಗಡಿ ಎಪ್ರಿಲ್ 1: ಹೈಪ್ರೊಪೈಲ್ ಕ್ಷೇತ್ರವಾಗಿ ಗುರುತಿಸಲ್ಪಟ್ಟಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಇಂದು ಪ್ರಸಿದ್ದ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಮಂಡ್ಯ ಲೋಕಸಭಾ ಚುನಾವಣೆಯ ಹಲವು ಗೊಂದಲಗಳ ನಡುವೆಯೂ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್, ಪುತ್ರ ಅಭಿಷೇಕ್ ಜೊತೆ ಶ್ರೀ ಧರ್ಮಸ್ಥಳದಲ್ಲಿ ಕ್ಷೇತ್ರದಲ್ಲಿ ದೇವರ ದರ್ಶನ ಮಾಡಿದರು. ಧರ್ಮಸ್ಥಳದಲ್ಲಿ ಸುಮಲತಾ ಕ್ಷೇತ್ರದ ಅಧಿಪತಿ ಮಂಜುನಾಥನಿಗೆ ವಿಶೇಷ ಪೂಜೆ ಸಲ್ಲಿಸಿದರು.

ಮಂಡ್ಯ ಕ್ಷೇತ್ರದಲ್ಲಿ ನಡೆಯುತ್ತಿರುವ ಬ್ಯಾಲೆಟ್ ಪೇಪರ್ ಗೊಂದಲ ಹಾಗೂ ಚುನಾವಣಾ ಜಟಾಪಟಿ ಕಗ್ಗಂಟಿನ ಹಿನ್ನಲೆ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಶ್ರೀ ಮಂಜುನಾಥನ ಮೊರೆ ಹೋಗಿದ್ದಾರೆ. ಇದೇ ಸಂದರ್ಭ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವಿರೇಂದ್ರ ಹೆಗ್ಗಡೆಯವರನ್ನ ಬೇಟಿಮಾಡಿ ಆಶೀರ್ವಾದ ಪಡೆದುಕೊಂಡರು. ಸುಮಲತಾಗೆ ಹಿರಿಯ ನಟ ದೊಡ್ಡಣ್ಣ, ಚಿತ್ರ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸಾಥ್ ನೀಡಿದರು.