LATEST NEWS
ಅಮೇರಿಕಾದ ಮಧ್ಯಸ್ಥಿಕೆಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಕದನ ವಿರಾಮ

ನವದೆಹಲಿ ಮೇ 10: ಭಾರತ ಹಾಗೂ ಪಾಕಿಸ್ತಾನದ ನಡುವೆ ತಕ್ಷಣದಿಂದಲೇ ಸಂಪೂರ್ಣ ಕದನ ವಿರಾಮ ಜಾರಿಯಾಗಿದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಭಾರತ ಮತ್ತು ಪಾಕಿಸ್ತಾನ ಸಂಪೂರ್ಣ ಮತ್ತು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ” ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಅಮೆರಿಕದ ಮಧ್ಯಸ್ಥಿಕೆಯಲ್ಲಿ ನಡೆದ ದೀರ್ಘ ರಾತ್ರಿಯ ಮಾತುಕತೆಯ ನಂತರ, ಭಾರತ ಮತ್ತು ಪಾಕಿಸ್ತಾನ ಪೂರ್ಣ ಮತ್ತು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಘೋಷಿಸಲು ನನಗೆ ಸಂತೋಷವಾಗಿದೆ. ಸಾಮಾನ್ಯಜ್ಞಾನ ಮತ್ತು ಉತ್ತಮ ಬುದ್ಧಿವಂತಿಕೆಯನ್ನು ಬಳಸಿದ್ದಕ್ಕಾಗಿ ಎರಡೂ ದೇಶಗಳಿಗೆ ಅಭಿನಂದನೆಗಳು ಎಂದು ಟ್ರಂಪ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

ಇನ್ನು ಭಾರತ ಮತ್ತು ಪಾಕಿಸ್ತಾನಗಳು ತಕ್ಷಣದಿಂದ ಜಾರಿಗೆ ಬರುವಂತೆ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಪಾಕಿಸ್ತಾನದ ಉಪ ಪ್ರಧಾನಿ ಇಶಾಕ್ ದಾರ್ ಹೇಳಿದ್ದಾರೆ.