Connect with us

    LATEST NEWS

    ಅಮೇರಿಕಾ ಮನೆಯಲ್ಲಿ ಅವಳಿ ಮಕ್ಕಳೊಂದಿಗೆ ಭಾರತೀಯ ದಂಪತಿ ಶವವಾಗಿ ಪತ್ತೆ..!

    ನ್ಯೂಯಾರ್ಕ್ :  ಅಮೇರಿಕಾದಲ್ಲಿ ಕೇರಳ ಮೂಲದ ದಂಪತಿ ಮತ್ತು ಅವರ 4 ವರ್ಷದ ಅವಳಿ ಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ. ಸಂಬಂಧಿಕರು ಕರೆ ಮಾಡಿದಾಗ ರಿಸೀವ್ ಮಾಡದ ಕಾರಣ ಅವರು ಮನೆಗೆ ಬಂದಿದ್ದಾಗ ಘಟನೆ ಬೆಳಕಿಗೆ ಬಂದಿದ್ದು, ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

    ಪೊಲೀಸರು ಮನೆಗೆ ಬಂದು ತಪಾಸಣೆ ನಡೆಸಿದಾಗ ದಂಪತಿ ಶವ ಬಾತ್​ ರೂಮ್​ನಲ್ಲಿ ಕಂಡುಬಂದಿದ್ದು ಜೊತೆಗೆ ಇಬ್ಬರು ಮಕ್ಕಳು ಕೋಣೆಯಲ್ಲಿ ಶವವಾಗಿದ್ದರು. ದಂಪತಿ ಮೈಮೇಲೆ ಗುಂಡಿನ ಗುರುತುಗಳು ಕಂಡುಬಂದಿದೆ. ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎನ್ನುವ ಕುರಿತು ನಿಖರ ಮಾಹಿತಿ ಲಭ್ಯವಾಗಿಲ್ಲ. ಆನಂದ್ ಸುಜಿತ್ ಹೆನ್ರಿ ಹಾಗೂ ಪತ್ನಿ ಆಲಿಸ್ ಪ್ರಿಯಾಂಕಾ ಮತ್ತು 4 ವರ್ಷದ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.  ಕೇರಳ ಮೂಲದ ಈ ಕುಟುಂಬ ಕಳೆದ 9 ವರ್ಷಗಳಿಂದ ಅಮೆರಿಕದಲ್ಲಿ ನೆಲೆಸಿತ್ತು. ದಂಪತಿ ಮೈಮೇಲೆ ಗುಂಡಿನ ಗುರುತುಗಳಿದ್ದವು, ಮನೆಯಲ್ಲಿ ಯಾರೋ ಅಪರಿಚಿತರು ಬಂದಿರುವ ಯಾವುದೇ ಲಕ್ಷಣಗಳಿರಲಿಲ್ಲ. ಆದರೆ ಕಿಟಕಿ ತೆರೆದಿತ್ತು ಅಲ್ಲಿಂದ ಯಾರಾದರೂ ಮನೆಯ ಒಳಗೆ ಬಂದಿದ್ದರೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ. ಬಾತ್​ರೂಮ್​ನಿಂದ 9 ಎಂಎಂ ಪಿಸ್ತೂಲ್ ಮತ್ತು ಲೋಡ್​ ಸಜೀವ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರಂಭದಲ್ಲಿ ಇದು ಆತ್ಮಹತ್ಯೆ ಎಂದೆನಿಸದರೂ ಹತ್ಯೆ ಅನುಮಾನವನ್ನು ಕೂಡ ತಳ್ಳಿ ಹಾಕುವಂತಿಲ್ಲ. ಪೊಲೀಸರು ತನಿಖೆ ಮುಂದುವರೆದಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply