Connect with us

    LATEST NEWS

    ಪೆಲೆಸ್ತೀನ್ ನ ಭಾರತದ ರಾಯಭಾರಿ ಮುಕುಲ್ ಆರ್ಯ ಅನುಮಾನಾಸ್ಪದವಾಗಿ ಸಾವು

    ನವದೆಹಲಿ: ಪೆಲೆಸ್ತೀನ್’ನಲ್ಲಿ ಭಾರತದ ರಾಯಭಾರಿಯಾಗಿರುವ ಮುಕುಲ್ ಆರ್ಯ ಅವರ ಮೃತದೇಹ ರಾಮಲ್ಹಾದಲ್ಲಿರುವ ಭಾರತೀಯ ರಾಯಭಾರ ಕಚೇರಿಯಲ್ಲಿ ಪತ್ತೆಯಾಗಿದೆ. ಆರ್ಯ ರಾಯಭಾರ ಕಚೇರಿಯೊಳಗೆ ನಿಗೂಢವಾಗಿ ಶವವಾಗಿ ಪತ್ತೆಯಾಗಿದ್ದಾರೆ. ಅವರ ಸಾವಿನ ಬಗ್ಗೆ ಪ್ಯಾಲೇಸ್ಟಿನಿಯನ್ ಅಧಿಕಾರಿಗಳು ತನಿಖೆಗೆ ಆದೇಶಿಸಿದ್ದಾರೆ ಪ್ಯಾಲೆಸ್ಟೈನ್‌ ಮಾಧ್ಯಮಗಳು ವರದಿ ಮಾಡಿವೆ.

    ಪ್ಯಾಲೆಸ್ಟೇನ್ನಲ್ಲಿರುವ ಭಾರತೀಯ ರಾಯಭಾರಿಯ ನಿಧನಕ್ಕೆ ವಿದೇಶಾಂಗ ಸಚಿವ ಡಾ.ಎಸ್ ಜೈಶಂಕರ್ ಟ್ವೀಟ್ ಮಾಡುವ ಮೂಲಕ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
    2008ನೇ ಬ್ಯಾಚಿನ ಐಎಫ್‌ಎಸ್‌ ಅಧಿಕಾರಿಯಾಗಿದ್ದ ಆರ್ಯ ವಿದೇಶಾಂಗ ವ್ಯವಹಾರ ಸಚಿವಾಲಯದ ಅಧಿಕಾರಿಯಾಗಿ, ಯುನೆಸ್ಕೋ ಭಾರತ ನಿಯೋಗದ ಕಾಯಂ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply