Connect with us

LATEST NEWS

ಭಾರತೀಯ ಪುಟ್ಬಾಲ್ ತಂಡದ ಮಾಜಿ ನಾಯಕ ಶೇಖರ್ ಪದ್ದು ಬಂಗೇರ ಕೊರೊನಾಗೆ ಬಲಿ

ಉಡುಪಿ ಜೂನ್ 10: ಭಾರತೀಯ ಫುಟ್ಬಾಲ್ ತಂಡದ ಮಾಜಿ ನಾಯಕ ಶೇಖರ್ ಪದ್ದು ಬಂಗೇರ(74) ಕೊರೊನಾ ಸೊಂಕಿನಿಂದ ಮೃತಪಟ್ಟಿದ್ದಾರೆ.


ಉಡುಪಿಯ ಬಡಾನಿಡಿಯೂರು ಮೂಲದ ಶೇಖರ್ ಪದ್ದು ಬಂಗೇರ ಅವರು ಭಾರತ ಫುಟ್ಬಾಲ್ ತಂಡದಲ್ಲಿ ಗೋಲ್ ಕೀಪರ್, ಕ್ಯಾಪ್ಟನ್ ಆಗಿದ್ದರು.

ಶೇಖರ್ ಪದ್ದು ಬಂಗೇರ ಅವರಿಗೆ ಇತ್ತೀಚಿಗೆ ಕರೊನಾ ಸೋಂಕು ತಗುಲಿತ್ತು. ಚಿಕಿತ್ಸೆಗಾಗಿ ಬ್ರಹ್ಮಾವರದ ಮಹೇಶ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಇಂದು ಉಡುಪಿಯಲ್ಲೇ ಅಂತ್ಯಕ್ರಿಯೆ ನೆರವೇರಲಿದೆ.