LATEST NEWS
ಭಾರತ ನಮ್ಮ ಮೇಲೆ ಯಾವುದೇ ಕ್ಷಣದಲ್ಲೂ ದಾಳಿ ಮಾಡಬಹುದು – ಪಾಕಿಸ್ತಾನದ ರಕ್ಷಣಾ ಸಚಿವ ಕ್ವಾಜಾ ಮೊಹಮ್ಮದ್ ಆಸಿಫ್

ಇಸ್ಲಾಮಾಬಾದ್ ಎಪ್ರಿಲ್ 28: ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಪ್ರವಾಸಿಗರ ಹತ್ಯೆಗೆ ಸಂಬಂಧಿಸಿದಂತೆ ಎರಡು ರಾಷ್ಟ್ರಗಳ ನಡುವೆ ಇರುವ ಉದ್ವಿಗ್ನ ಪರಿಸ್ಥಿತಿ ಕುರಿತಂತೆ ಇದೀಗ ಪಾಕಿಸ್ತಾನದ ರಕ್ಷಣಾ ಸಚಿವರು ಮಹತ್ವದ ಹೇಳಿಕೆಯನ್ನು ನೀಡಿದ್ದು, ಭಾರತವು ದಾಳಿಗೆ ಸಜ್ಜಾಗಿದ್ದು, ಯಾವುದೇ ಕ್ಷಣದಲ್ಲಿ ನಡೆಯುವ ಸಾಧ್ಯತೆ ಇದೆ’ ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಕ್ವಾಜಾ ಮೊಹಮ್ಮದ್ ಆಸಿಫ್ ಹೇಳಿದ್ದಾರೆ.
ಈಗಾಗಲೇ ಪಹಲ್ಲಾಮ್ ದಾಳಿಯ ಮಾಡಿರುವ ಭಯೋತ್ಪಾದಕರನ್ನು ಹುಡುಕಿ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ಎಚ್ಚರಿಕೆ ನೀಡಿದ್ದಾರೆ. ಈ ನಡುವೆ ಪಾಕಿಸ್ತಾನ ಕೂಡ ಭಾರತದ ಸಂಭಾವ್ಯ ದಾಳಿ ಎದುರಿಸಲು ಸಜ್ಜಾಗಿದೆ. ಪಾಕಿಸ್ತಾನದ ಸೇನೆಯ ಸಿದ್ಧತೆ ಕುರಿತು ಮಾತನಾಡಿರುವ ಸಚಿವ ಆಸಿಫ್, ‘ಕಾಲ ಸನ್ನಿಹಿತವಾಗಿದೆ. ಹೀಗಾಗಿ ನಮ್ಮ ಸೇನೆಯನ್ನು ಬಲಪಡಿಸುತ್ತಿದ್ದೇವೆ. ಸಂದಿಗ್ಧ ಸಂದರ್ಭದಲ್ಲಿ ಪ್ರಮುಖ ಕಾರ್ಯತಂತ್ರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಅವೆಲ್ಲವನ್ನೂ ತೆಗೆದುಕೊಳ್ಳಲಾಗಿದೆ’ ಎಂದಿದ್ದಾರೆ.

ವಾಗ್ಯುದ್ದಗಳು ಹೆಚ್ಚಾಗಿವೆ. ಭಾರತದ ದಾಳಿಯ ಸಾಧ್ಯತೆ ಕುರಿತು ಸರ್ಕಾರಕ್ಕೆ ಸೇನೆ ಮಾಹಿತಿ ನೀಡಿದೆ. ನಮ್ಮ ಅಸ್ತಿತ್ವಕ್ಕೆ ನೇರ ಅಪಾಯ ಎದುರಾದರೆ ಮಾತ್ರ ಅಣ್ವಸ್ತ್ರ ಉಪಯೋಗಿಸಲಾಗುವುದು ಎಂದಿದ್ದಾರೆ.