LATEST NEWS
ಪ್ರಯಾಣಿಕರು ರನ್ ವೇ ನಲ್ಲಿ ಊಟ ಮಾಡಿದ್ದಕ್ಕೆ ಇಂಡಿಗೋ ಸಂಸ್ಥೆಗೆ ಬಿತ್ತು 1.2ಕೋಟಿ ದಂಡ
ನವದೆಹಲಿ ಜನವರಿ 18: ವಿಮಾನ ಲೇಟ್ ಆಗಿದ್ದಕ್ಕೆ ಮುಂಬೈ ಏರ್‌ಪೋರ್ಟ್‌ನ ರನ್‌ವೇನಲ್ಲೇ ಪ್ರಯಾಣಿಕರು ಕುಳಿತು ಆಹಾರ ಸೇವಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂಡಿಗೋ ಸಂಸ್ಥೆಗೆ 1.2 ಕೋಟಿ ರೂ. ದಂಡ ವಿಧಿಸಲಾಗಿದೆ.
ಇತ್ತೀಚೆಗೆ ದೆಹಲಿಯಲ್ಲಿ ಅತಿಯಾದ ಮಂಜಿನಿಂದಾಗಿ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿತ್ತು, ಹಲವಾರು ವಿಮಾನಗಳು 12 ಗಂಟೆಗಳಿಗಿಂತಲೂ ಅಧಿಕ ಸಮಯ ವಿಳಂಬವಾಗಿತ್ತು. ಗೋವಾ-ದೆಹಲಿ ಮಾರ್ಗದ ಇಂಡಿಗೋ ವಿಮಾನ ಹಾರಾಟ ವಿಳಂಬವಾದ ಕಾರಣ ಪ್ರಯಾಣಿಕರು ರನ್‌ವೇನಲ್ಲೇ ಕುಳಿತು ಊಟ ಸೇವಿಸಿದ್ದರು. ಈ ದೃಶ್ಯದ ವೀಡಿಯೋ ಎಲ್ಲೆಡೆ ವೈರಲ್ ಆಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಇಂಡಿಗೋ ವಿಮಾನ ಸಂಸ್ಥೆಗೆ ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ಸೆಕ್ಯುರಿಟಿ (BCAS) ದಂಡ ವಿಧಿಸಿದೆ.
ದೇಶದ ವಿಮಾನಯಾನ ನಿಯಂತ್ರಕ, ಡಿಜಿಸಿಎ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ವೀಡಿಯೋ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಲೋಪಕ್ಕಾಗಿ ಮುಂಬೈ ವಿಮಾನ ನಿಲ್ದಾಣಕ್ಕೆ 30 ಲಕ್ಷ ರೂ. ದಂಡ ವಿಧಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇಂಡಿಗೋ ಹಾಗೂ ಮುಂಬೈ ವಿಮಾನ ನಿಲ್ದಾಣಕ್ಕೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿತ್ತು. ಇದೇ ವೇಳೆ ಮುಂಬೈ ವಿಮಾನ ನಿಲ್ದಾಣಕ್ಕೆ ಡಿಜಿಸಿಎ 30 ಲಕ್ಷ ರೂ. ದಂಡ ವಿಧಿಸಿತ್ತು.
You must be logged in to post a comment Login