ಮಂಗಳೂರಿನಲ್ಲಿ 5 ಕಡೆ ಇಂದಿರಾ ಕ್ಯಾಂಟೀನ್-ಯು.ಟಿ.ಖಾದರ್
ಮಂಗಳೂರು,ಅಕ್ಟೋಬರ್ 16: ಬರುವ ಜನವರಿಯಿಂದ ಮಂಗಳೂರಿನಲ್ಲಿ ಇಂದಿರಾ ಕ್ಯಾಂಟೀನ್ ಆರಂಭಗೊಳ್ಳಲಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಯುಟಿ ಖಾದರ್ ತಿಳಿಸಿದ್ದಾರೆ .ಮಂಗಳೂರಿನಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 5 ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ತಲಾ ಒಂದರಂತೆ ಇಂದಿರಾ ಕ್ಯಾಂಟೀನ್ ಆರಂಭಿಸಲಾಗುವುದು ಎಂದು ಅವರು ತಿಳಿಸಿದರು. ಇಂದಿರಾ ಕ್ಯಾಂಟೀನ್ ಆರಂಭಿಸಲು ಸ್ಥಳದ ಆಯ್ಕೆಗೆ ಈಗಾಗಲೇ ಸ್ಥಳೀಯಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ಹೇಳಿದ ಅವರು ಜನವರಿಯಲ್ಲಿ ಕರಾವಳಿಯಲ್ಲಿ ಇಂದಿರಾ ಕ್ಯಾಂಟೀನ್ ಆರಂಭಗೊಳ್ಳಲಿದೆ ಎಂದು ಅವರು ಹರ್ಷ ವ್ಯಕ್ತಪಡಿಸಿದರು . ತಮ್ಮ ಕ್ಷೇತ್ರ ವ್ಯಪ್ತಿಯ ಉಳ್ಳಾಲ ದಲ್ಲಿಯೂ ಒಂದು ಇಂದಿರಾ ಕ್ಯಾಂಟೀನ್ ಆರಂಭಗೊಳ್ಳಲಿದೆ ಎಂದು ಅವರು ಸ್ಪಷ್ಟಪಡಿಸಿದರು .





