Connect with us

    LATEST NEWS

    ಇಂದೋರ್ – ದೇವಸ್ಥಾನದ ಮೆಟ್ಟಿಲುಬಾವಿ ಕುಸಿತ – 12ಕ್ಕೂ ಅಧಿಕ ಮಂದಿ ಸಾವು

    ಇಂದೋರ್ ಮಾರ್ಚ್ 30: ಮಧ್ಯಪ್ರದೇಶದ ಇಂದೋರ್‌ನ ದೇವಸ್ಥಾನವೊಂದರಲ್ಲಿ ಮೆಟ್ಟಿಲು ಬಾವಿ ಕುಸಿದು ಬಿದ್ದ ಪರಿಣಾಮ ಕನಿಷ್ಠ 12 ಮಂದಿ ಸಾವನ್ನಪ್ಪಿದ್ದಾರೆ.


    ಇಂದೋರ್‌ನ ಬೆಳೇಶ್ವರ ಮಹಾದೇವ್ ಜುಲೇಲಾಲ್ ದೇವಸ್ಥಾನದಲ್ಲಿರುವ ಪುರಾತನವಾದ ‘ ಬಾವಡಿ ‘ (ದೊಡ್ಡ ಬಾವಿ) ರಾಮನವಮಿ ಹಬ್ಬದ ಸಂದರ್ಭದಲ್ಲಿ ಕುಸಿದುಬಿದ್ದಿದ್ದು, ಸುಮಾರು 25 ಜನರು ಒಳಗೆ ಬಿದ್ದಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ. ಸದ್ಯ 12 ಮಂದಿ ಸಾವನಪ್ಪಿದ್ದು 19 ಮಂದಿಯನ್ನು ರಕ್ಷಿಸಿದ್ದಾರೆ.

    ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ, ಪೊಲೀಸ್ ಅಧಿಕಾರಿಗಳು ಹಾಗೂ ಜಿಲ್ಲಾಡಳಿತ ಸ್ಥಳಕ್ಕೆ ಧಾವಿಸಿದ್ದು, ಭಕ್ತರನ್ನು ಸ್ಥಳಾಂತರಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಘಟನೆ ಬಗ್ಗೆ ಮಾಹಿತಿ ಪಡೆದಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ಚುರುಕುಗೊಳಿಸುವಂತೆ ಸ್ಥಳೀಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ. ಘಟನೆ ಕುರಿತು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರೊಂದಿಗೆ ಮಾತನಾಡಿದ್ದು, ಮಾಹಿತಿ ಪಡೆದಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply