LATEST NEWS
ಅಕ್ಟೋಬರ್ 1 ರಿಂದ ಇಂದ್ರಾಳಿ ರೈಲ್ವೆ ಮೇಲ್ಸೆತುವೆ ಮೇಲಿನ ರಸ್ತೆ ಆಭಿವೃಧ್ದಿ ಕಾಮಗಾರಿ ಅರಂಭ – ಜಿಲ್ಲಾಧಿಕಾರಿ

ಉಡುಪಿ, ಸೆಪ್ಟಂಬರ್ 15 : ಜಿಲ್ಲೆಯಲ್ಲಿ ಸಾರ್ವಜನಿಕರ ಸುಗಮ ಮತ್ತು ಸುರಕ್ಷಿತ ಸಂಚಾರಕ್ಕೆ ಅಗತ್ಯವಿರುವ ರಸ್ತೆ ಸುದಾರಣಾ ಮೂಲಭೂತ ಕಾಮಗಾರಿಗಳನ್ನು ಕೈಗೊಂಡು ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟು ಅಪಘಾತ ಪ್ರಮಾಣವನ್ನು ಅತ್ಯಂತ ಕಡಿಮೆಗೊಳಿಸಬೆಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ ನೀಡಿದರು.
ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜನಸಾಮಾನ್ಯರು ರಸ್ತೆಯಲ್ಲಿ ಸಂಚರಿಸುವಾಗ ರಸ್ತೆ ಸುರಕ್ಷತಾ ನಿಯಮಗಳನ್ನು ಚಾಚೂ ತಪ್ಪದೇ ಪಾಲಿಸಿದಾಗ ಅಪಘಾತದಿಂದ ದೂರವಿರಲು ಸಾಧ್ಯ, ನಿಯಮಗಳನ್ನು ಪಾಲಿಸಿದದ್ದಲ್ಲಿ ಸುರಕ್ಷಿತವಾಗಿ ಸಂಚರಿಸಲು ಅಸಾಧ್ಯವಾಗುತ್ತದೆ ಇದನ್ನು ಪ್ರತಿಯೊಬ್ಬರ ಗಮನದಲ್ಲಿರಬೇಕು ಎಂದರು.

ಜಿಲ್ಲೆಯಲ್ಲಿ ಈಗಾಗಲೇ 30 ಕ್ಕೂ ಹೆಚ್ಚು ಅಪಘಾತ ವಲಯ ಬ್ಲಾಕ್ ಸ್ಪಾಟ್‌ಗಳನ್ನು ಗುರುತಿಸಲಾಗಿದ್ದು, ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿಗೆ ಸಂಬಂಧಿಸಿದ ಅಧಿಕಾರಿಗಳು ತತ್ ಕ್ಷಣದಲ್ಲಿಯೇ ತಾತ್ಕಾಲಿಕ ಸುರಕ್ಷಿತಾ ಸೌಕರ್ಯಗಳ ಕಾರ್ಯಗಳನ್ನು ಕೈಗೊಳ್ಳುವುದರಿಂದ ಮರಣ ಹೊಂದುವAತಹ ಅಪಘಾತಗಳನ್ನು ತಪ್ಪಿಸಲು ಸಾಧ್ಯ ಇದಕ್ಕೆ ಹೆಚ್ಚಿನ ಒತ್ತು ನೀಡಬೇಕು , ಮುಂದಿನ ದಿನಗಳಲ್ಲಿ ಶಾಶ್ವತ ಕಾಮಗಾರಿಗಳನ್ನು ಕೈಗೊಳ್ಳಬೇಕು ಈ ಬಗ್ಗೆ ತೆಗೆದುಕೊಂಡ ಕಾರ್ಯಗಳ ಬಗ್ಗೆ ಜಿಲ್ಲಾ ರಸ್ತೆ ಸುರಕ್ಷತಾ ಪ್ರಾಧಿಕಾರಕ್ಕೆ ಅನುಸರಣಾ ವರದಿಯನ್ನು ಒಂದು ವಾರದೊಳಗೆ ನೀಡಬೇಕೆಂದು ಸೂಚನೆ ನೀಡಿದರು. ಇಂದ್ರಾಳಿ ರೈಲ್ವೆ ಮೇಲು ಸೇತುವೆ ಮೇಲಿನ ರಸ್ತೆ ಆಭಿವೃಧ್ದಿ ಕಾಮಗಾರಿಗಳನ್ನು ಅಕ್ಟೋಬರ್ 1 ರಿಂದ ಪ್ರಾರಂಭಿಸಿ 1 ತಿಂಗಳ ಒಳಗಾಗಿ ಪೂರ್ಣ ಪ್ರಮಾಣದಲ್ಲಿ ಒಂದು ಬದಿಯ ರಸ್ತೆಯನ್ನು ಪೂರ್ಣಗೊಳಿಸಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ಕಾರ್ಯವನ್ನು ರಾಷ್ಟಿçÃಯ ಹೆದ್ದಾರಿ ಅಧಿಕಾರಿಗಳು ಕೈಗೊಳ್ಳಬೇಕು. ಈ ಕಾಮಗಾರಿಗೆ ಅಗತ್ಯವಿರುವ ಎಲ್ಲಾ ರೀತಿಯ ಸಹಕಾರವನ್ನು ಪೊಲೀಸ್ ಇಲಾಖೆ, ನಗರಸಭೆ ಹಾಗೂ ರೈಲ್ವೆ ಇಲಾಖೆ ಅಧಿಕಾರಿಗಳು ನೀಡಬೇಕು ಎಂದು ಸೂಚನೆ ನೀಡಿದರು.