Connect with us

    DAKSHINA KANNADA

    ಕೈಗಾರಿಕಾ ಮಾಲಿನ್ಯದ ತ್ಯಾಜ್ಯ ತೋಕೂರು ಹಳ್ಳಕ್ಕೆ : ಅಪಾಯದಲ್ಲಿ ಫಲ್ಗುಣಿ ನದಿ

    ಮಂಗಳೂರು, ಮಾರ್ಚ್ 03: ಬೈಕಂಪಾಡಿ ಕೈಗಾರಿಕಾ ವಲಯ, mrpl, sez ಕಡೆಯಿಂದ ಹರಿದು ಫಲ್ಗುಣಿ ನದಿ ಸೇರುವ ತೋಕೂರು ಹಳ್ಳಕ್ಕೆ ಕಳೆದ ನಾಲ್ಕೈದು ದಿನಗಳಿಂದ ಇಲ್ಲಿನ ಕೈಗಾರಿಕಾ ಘಟಕಗಳು ತಮ್ಮ ಕೈಗಾರಿಕಾ ಮಾಲಿನ್ಯದ ತ್ಯಾಜ್ಯವನ್ನು ಹರಿಯಬಿಟ್ಟಿದ್ದು ನೀರು ಕಪ್ಪು ಬಣ್ಣಕ್ಕೆ ತಿರುಗಿ ಪೂರ್ತಿ ಕೊಳೆತು ನಾರುತ್ತಿದೆ ಜೊತೆಗೆ ನೇರವಾಗಿ ಪಲ್ಗುಣಿ ನದಿಗೆ ಸೇರುತ್ತಿದೆ.

    ಈ ಕುರಿತು ಇಂದು ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶೀಕ ಅಧಿಕಾರಿಗೆ ಹೋರಾಟ ಸಮಿತಿ ಜೋಕಟ್ಟೆ ದೂರು ನೀಡಿದ ಪ್ರಯುಕ್ತ ಪ್ರಾದೇಶಿಕ ಅಧಿಕಾರಿ ರಮೇಶ್ ನೇತೃತ್ವದ ತಂಡ ಸ್ಥಳ ಪರಿಶೀಲನೆ ನಡೆಸಿ ನೀರಿನ ಸ್ಯಾಂಪಲ್ ಸಂಗ್ರಹಿಸಿತು.‌

    ಕೈಗಾರಿಕಾ ಮಾಲಿನ್ಯ ಆಗುತ್ತಿರುವುದು ಮೇಲ್ನೋಟಕ್ಕೆ ಗೋಚರಿಸುತ್ತಿರುವುದಾಗಿ ಒಪ್ಪಿಕೊಂಡಿತು. ಈ ಕುರಿತು ಸರಿಯಾದ ತನಿಖೆ ನಡೆಸಿ ತಪ್ಪಿತಸ್ಥ ಕಂಪೆನಿಗಳ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಲು, ಪಲ್ಗುಣಿ ನದಿಯನ್ನು ಉಳಿಸಲು ನಾಗರಿಕ ಹೋರಾಟ ಸಮಿತಿ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳನ್ನು ಆಗ್ರಹಿಸಿತು.‌ ಇಲ್ಲದಿದ್ದಲ್ಲಿ ಪ್ರತಿಭಟನೆಗಳನ್ನು ಹಮ್ಮಿಕೊಳ್ಳುವುದಾಗಿ ಎಚ್ಚರಿಸಿತು.

    ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ, ಜೋಕಟ್ಟೆ ಗ್ರಾಮ ಪಂಚಾಯತ್ ಅಧ್ಯಕ್ಷ ಫಾರೂಕ್, ಪಂಚಾಯತ್ ಸದಸ್ಯ, ಹೋರಾಟ ಸಮಿತಿ ಪ್ರಮುಖ ಅಬೂಬಕ್ಕರ್ ಬಾವ ಉಪಸ್ಥಿತರಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply