LATEST NEWS
ಒಳ ಉಡುಪಿನಲ್ಲಿ ಚಿನ್ನ ಸಾಗಾಟಕ್ಕೆ ಯತ್ನ – ಕಸ್ಟಮ್ಸ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ದಂಪತಿ

ಮಂಗಳೂರು ಮಾರ್ಚ್ 28: ಮಹಿಳೆಯ ಒಳ ಉಡುಪಿನಲ್ಲಿ ಅಕ್ರಮವಾಗಿ ಚಿನ್ನ ಸಾಗಾಟಕ್ಕೆ ಯತ್ನಿಸುತ್ತಿದ್ದ ದಂಪತಿಗಳನ್ನು ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಬಂಧಿತರನ್ನು ಕೇರಳದ ಕಾಸರಗೋಡಿನ ಚೆರೂರ್ ಮೂಲದವರಾದ ಫೌಸಿಯಾ ಮಿಸ್ಸಿರಿಯಾ ಮೊಯಿದೀನ್ ಕುನ್ಹಿ ಅವರು ತನ್ನ ಪತಿ ಮೊಯಿದೀನ್ ಕುನ್ಹಿ ಚೆರೂರ್ ಹಾಗೂ 4 ಮಕ್ಕಳೊಂದಿಗೆ ದುಬೈನಿಂದ ಬರುತ್ತಿರುವ ಏರ್ ಇಂಡಿಯಾ ವಿಮಾನದಿಂದ ಇಳಿದಿದ್ದು, ಅಲ್ಲಿಂದ ಮಹಿಳೆಯು ವಿಶೇಷವಾಗಿ ವಿನ್ಯಾಸಗೊಳಿಸಿದ ಒಳ ಉಡುಪಿನಲ್ಲಿ ಮರೆಮಾಚುವ ಮೂಲಕ ಚಿನ್ನವನ್ನು ಕಳ್ಳಸಾಗಣೆ ಮಾಡಲು ಪ್ರಯತ್ನಿಸಿದ್ದಾರೆ ಎನ್ನಲಾಗಿದೆ.

ಇನ್ನು 39.48 ಲಕ್ಷ ರೂ.ಗಳ ಮೌಲ್ಯದ ನಿವ್ವಳ ತೂಕ 851 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಇತ್ತೀಚಿನ ದಿನಗಳಲ್ಲಿ ಮಂಗಳೂರು ವಿಮಾನ ನಿಲ್ದಾಣದ ಮೂಲಕ ಒಳಉಡುಪಿನಲ್ಲಿ ಅಕ್ರಮ ಚಿನ್ನ ಸಾಗಾಟ ಪ್ರಕರಣಗಳು ಹೆಚ್ಚಾಗುತ್ತಲೆ ಇದೆ. ಈಗಾಗಲೇ ಹಲವಾರು ಪ್ರಕರಣಗಳಲ್ಲಿ ಅಂಡರ್ ವೇರ್ ನಲ್ಲಿ ಚಿನ್ನ ಸಾಗಾಟಕ್ಕೆ ಯತ್ನಿಸಿ ಕಳ್ಳರು ಸಿಕ್ಕಿ ಹಾಕಿಕೊಂಡಿದ್ದಾರೆ.