KARNATAKA
ದೊಡ್ಡಬಳ್ಳಾಪುರ – ಲಾರಿ ಓವರ್ ಟೆಕ್ ಮಾಡುವ ಭರದಲ್ಲಿ ಪಲ್ಟಿಯಾದ ಇನ್ನೋವಾ ಕಾರು -ನಾಲ್ವರು ಸಾವು

ದೊಡ್ಡಬಳ್ಳಾಪುರ ಜುಲೈ 01 : ಲಾರಿಯೊಂದನ್ನು ಓವರ್ ಟೆಕ್ ಮಾಡುವ ಭರದಲ್ಲಿ ಇನ್ನೋವಾ ಕಾರು ಪಲ್ಟಿಯಾಗಿ ನಾಲ್ವರು ಸಾವನಪ್ಪಿದ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮಾಕಳಿ ಬಳಿ ಇಂದು ಬೆಳಗ್ಗೆ ನಡೆದಿದೆ.
ಮೃತರನ್ನು ದೊಡ್ಡಬಳ್ಳಾಪುರ ನಗರದ ಕರೇನಹಳ್ಳಿ ನಿವಾಸಿಗಳಾದ ಕಾಳಪ್ಪ, ಪುರುಷೋತ್ತಮ, ನಾರಾಯಣಪ್ಪ ಮತ್ತು ಈಶ್ವರಪ್ಪ ಮೃತರು. ನಾಲ್ವರು ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

ಮೃತರು ಇಂದು ಬೆಳಗ್ಗೆ ಮಂಚೇನಹಳ್ಳಿಯ ಭೀಮೇಶ್ವರ ಬೆಟ್ಟದ ಮಹೇಶ್ವರಮ್ಮನ ದರ್ಶನಕ್ಕೆ ಹೊರಟ್ಟಿದ್ದರು. ದೊಡ್ಡಬಳ್ಳಾಪುರ – ಗೌರಿಬಿದನೂರು ರಸ್ತೆಯ ಮಾಕಳಿ ಬಳಿ ಓವರ್ ಟೇಕ್ ಮಾಡುವ ವೇಳೆ ಎದುರಿಗೆ ಕೆಎಸ್ಆರ್ಟಿಸಿ ಬಸ್ ಅಡ್ಡ ಬಂದಿದ್ದು, ಈ ವೇಳೆ ಎಡಕ್ಕೆ ಕಾರನ್ನು ತಿರುಗಿಸುವಾಗ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.