DAKSHINA KANNADA
ಬೀದಿಬದಿ ವ್ಯಾಪಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಲು ಪಾಲಿಕೆ ಸಭೆಯಲ್ಲಿ ಒತ್ತಾಯ
ಮಂಗಳೂರು, ಮಾರ್ಚ್ 01: ಬೀದಿಬದಿ ವ್ಯಾಪಾರಿಗಳ ತೆರವು ಕಾರ್ಯಾದ ವೇಳೆ ಮಹಾನಗರ ಪಾಲಿಕೆ ಅಧಿಕಾರಿಗಳ ಮೇಲೆ ಬೀದಿಬದಿ ವ್ಯಾಪಾರಿಗಳು ದಾಳಿ ಮಾಡಿರುವ ಬಗ್ಗೆ ಈಗಾಗಲೇ ಪೊಲೀಸ್ ದೂರು ದಾಖಲು ಮಾಡಲಾಗಿದೆ. ಅಲ್ಲದೇ ದಾಳಿಕೋರರ ವಿರುದ್ಧ ಎಫ್ಐಆರ್ ದಾಖಲು ಆಗುವಂತೆ ಒತ್ತಡ ಹೇರಲಾಗುತ್ತದೆ ಎಂದು ಆಯುಕ್ತ ಚನ್ನಬಸಪ್ಪ ಹೇಳಿದರು.
ಇದಕ್ಕೆ ಪೂರಕವಾಗಿ ಪ್ರತಿಕ್ರಿಯೆ ನೀಡಿದ ಆಡಳಿತ ಪಕ್ಷದ ಸದಸ್ಯ ಸುಧೀರ್ ಶೆಟ್ಟಿ ಕಣ್ಣೂರು, ಮುಖ್ಯ ರಸ್ತೆಗಳ ಫುಟ್ ಪಾತ್ಗಳಲ್ಲಿ ಬಹಳಷ್ಟು ಮಂದಿ ಬೀದಿ ಬದಿ ವ್ಯಾಪಾರಸ್ಥರು ವ್ಯಾಪಾರ ಮಾಡುತ್ತಿರುವುದನ್ನು ನಾವು ಕಾಣಬಹುದು. ಆದ್ದರಿಂದ ಮತ್ತೆ ಮಹಾನಗರ ನಗರ ಪಾಲಿಕೆ ಟೈಗರ್ ಕಾರ್ಯಾಚರಣೆ ಆರಂಭಿಸಬೇಕು. ಅಲ್ಲದೆ ನಗರದ ಐದು ಕಿ.ಮೀ. ವ್ಯಾಪ್ತಿಯನ್ನು ಬೀದಿಬದಿ ವ್ಯಾಪಾರಕ್ಕೆ ನಿರ್ಬಂಧಿತ ಪ್ರದೇಶ ಎಂದು ಘೋಷಿಸಬೇಕು ಎಂದು ಒತ್ತಾಯ ಮಾಡಿದರು.
ಈ ಸಂದರ್ಭದಲ್ಲಿ ಉತ್ತರಿಸಿದ ಮಂಗಳೂರು ಮಹಾ ನಗರ ಪಾಲಿಕೆ ಆಯುಕ್ತ ಚನ್ನಬಸಪ್ಪ, ಮಹಾ ನಗರ ಪಾಲಿಕೆ ಅಧಿಕಾರಿಗಳ ಮೇಲೆ ದಾಳಿ ಮಾಡಿದವರ ವಿರುದ್ದ ಎಫ್ಐಆರ್ ದಾಖಲು ಮಾಡುವಂತೆ ಒತ್ತಡವನ್ನು ಹೇರಲಾಗುವುದೆಂದು ತಿಳಿಸಿದರು. ಸ್ವಯಂಘೋಷಿತ ಆಸ್ತಿ ತೆರಿಗೆ ಪಾವತಿಯಲ್ಲಿ ಮಂಗಳೂರು ಮಹಾನಗರ ನಗರ ಪಾಲಿಕೆ ನಾಗರಿಕರಿಗೆ ಹೊರೆಯಾಗುವಂತೆ ಈ ಬಾರಿ ತೆರಿಗೆಯನ್ನು ವಿಧಿಸಲಾಗುತ್ತದೆ ಎಂದು ಮಹಾನಗರ ನಗರ ಪಾಲಿಕೆ ವಿಪಕ್ಷ ಸದಸ್ಯ ಎ.ಸಿ.ವಿನಯರಾಜ್ ಅವರು ಆಕ್ರೋಶ ವ್ಯಕ್ತಪಡಿಸಿದರು. ಮಹಾನಗರ ನಗರ ಪಾಲಿಕೆ ಆಯುಕ್ತ ಚನ್ನಬಸಪ್ಪರ ಮಾತನಾಡಿ, ಜನತೆಗೆ ಯಾವುದೇ ರೀತಿಯಲ್ಲಿ ಹೆಚ್ಚು ಹೊರೆಯಾಗದಂತೆ ಪರಿಷ್ಕೃತ ತೆರಿಗೆಯನ್ನು ವಿಧಿಸಲಾಗುತ್ತದೆ ಎಂದು ಹೇಳಿದರು.