LATEST NEWS
ಪ್ರಧಾನಿ ಧರ್ಮಸ್ಥಳ ಭೇಟಿ – ತೀವ್ರಗೊಂಡ ನಕ್ಸಲ್ ಕೂಂಬಿಂಗ್
ಪ್ರಧಾನಿ ಧರ್ಮಸ್ಥಳ ಭೇಟಿ – ತೀವ್ರಗೊಂಡ ನಕ್ಸಲ್ ಕೂಂಬಿಂಗ್
ಮಂಗಳೂರು ಅಕ್ಟೋಬರ್ 25: ಪ್ರಧಾನಿ ನರೇಂದ್ರ ಮೋದಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಬಿಗಿ ಪೊಲೀಸ್ ಬಂದೋಬಸ್ತಗೆ ವ್ಯವಸ್ಥೆ ಮಾಡುತ್ತಿದೆ. ಜಿಲ್ಲೆಯ ಎಲ್ಲಾ ಆಯಕಟ್ಟಿನ ಸ್ಥಳ ಸೇರಿದಂತೆ ಪಶ್ಚಿಮಘಟ್ಟ ತಪ್ಪಲಿನಲ್ಲಿ ನಡೆಯುತ್ತಿರುವ ಚಟುವಟಿಕೆಗಳ ಮೇಲೆ ಹದ್ದಿನ ಕಣ್ಣಿರಿಸಲಾಗಿದೆ.
ಪ್ರಧಾನಿ ಅವರ ಭದ್ರತೆಯ ಜವಾಬ್ದಾರಿ ಹೊತ್ತಿರುವ ಎಸ್ಪಿಜಿ ಪಡೆಯ ಐಜಿ ಶ್ರೇಣಿಯ ಅಧಿಕಾರಿ ಈಗಾಗಲೇ ಧರ್ಮಸ್ಥಳ ಆಗಮಿಸಿದ್ದಾರೆ . ಪ್ರಧಾನಿ ಭೇಟಿ ನೀಡುವ ಶ್ರೀಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿ ದೇವಾಲಯ ಹಾಗೂ ಬಹಿರಂಗ ಸಭೆ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ .
ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ ಈಗಾಗಲೇ ಧರ್ಮಸ್ಥಳದಲ್ಲಿ ಬೀಡು ಬಿಟ್ಟಿದ್ದು ಎಲ್ಲೆಡೆ ಪರಿಶೀಲನೆ ನಡೆಸಿದ್ದಾರೆ .
ನಕ್ಸಲ್ ನಿಗ್ರಹ ದಳ ಈಗಾಗಲೇ ಧರ್ಮಸ್ಥಳಕ್ಕೆ ಆಗಮಿಸಿದ್ದು ಮುಂಜಾನೆಯಿಂದಲೇ ಪಶ್ಚಿಮ ಘಟ್ಟದ ತಪ್ಪಲಿನ ಅರಣ್ಯ ಪ್ರದೇಶದಲ್ಲಿ ಕೂಂಬಿಂಗ್ ಕಾರ್ಯಾಚರಣೆ ಆರಂಭಿಸಿದೆ.
ಅಕ್ಟೋಬರ್ 29 ರಂದು ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮ ಹಿನ್ನೆಲೆಯಲ್ಲಿ 10 ಎಸ್ ಪಿ ಶ್ರೇಣಿಯ ಅಧಿಕಾರಿಗಳು, 150 ಪಿ ಎಸ್ ಐ, ಡಿ ಎಸ್ ಪಿ ಶ್ರೇಣಿ ಅಧಿಕಾರಿಗಳು ಸೇರಿದಂತೆ 2000 ಪೊಲೀಸ್ ಸಿಬ್ಬಂದಿ ಗಳನ್ನು ಬಂದೋಬಸ್ತಗೆ ನಿಯೋಜಿಸಲಾಗಿದೆ.