Connect with us

    LATEST NEWS

    ಗಾಜಾ ಮೇಲೆ ತೀವ್ರಗೊಂಡ ಇಸ್ರೇಲ್ ದಾಳಿ, ಗಡಿಯಲ್ಲಿ ಭಾರಿ ಪ್ರಮಾಣದಲ್ಲಿ ಟ್ಯಾಂಕ್‌ಗಳ ನಿಯೋಜನೆ- 5700 ರ ಗಡಿ ದಾಟಿದ ಸಾವಿನ ಸಂಖ್ಯೆ..!

    ಜೆರುಸಲೇಂ: ಇಸ್ರೇಲ್ ಭೂಮಿಯಲ್ಲಿ ನುಗ್ಗಿ ನರಮೇಧ ಮಾಡಿರುವ ಹಮಾಸ್‌ ಉಗ್ರರನ್ನು ನಿರ್ನಾಮ ಮಾಡಲು ಪಣತೊಟ್ಟಿರುವ ಇಸ್ರೇಲ್‌ ಗಾಜಾ ಪಟ್ಟಿ ಮೇಲೆ ನಡೆಸುತ್ತಿರುವ ದಾಳಿಯನ್ನು ಮತ್ತಷ್ಟು ತೀವ್ರಗೊಳಿಸಿದ್ದು 700 ಕ್ಕೂ ಅಧಿಕ ಮಂದಿ ಕಳೆದ 24 ಗಂಟೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಹಮಾಸ್ ಉಗ್ರರೇ ಮಾಹಿತಿ ನೀಡಿದ್ದಾರೆ.


    ಇಸ್ರೇಲ್‌ ಹಾಗೂ ಹಮಾಸ್‌ ಉಗ್ರರ ಸಮರ ಆರಂಭವಾದ ಬಳಿಕ ಇಸ್ರೇಲ್‌ ನಡೆಸಿದ ಅತ್ಯಂತ ಭೀಕರ ದಾಳಿ ಇದಾಗಿದೆ ಎಂದು ವಿಶ್ಲೇಶಿಸಲಾಗಿದೆ. ಹಮಾಸ್‌ನ 400 ಪ್ರಮುಖ ಉಗ್ರರನ್ನು ಗುರಿಯಾಗಿಸಿ ಇಸ್ರೇಲ್‌ ರಾತ್ರೋರಾತ್ರಿ ಗಾಜಾ ನಗರದ ಮೇಲೆ ದಾಳಿ ನಡೆಸಿದೆ. ಆದರೆ, ದಾಳಿಯಲ್ಲಿ 700ಕ್ಕೂ ಅಧಿಕ ನಾಗರಿಕರು ಮೃತಪಟ್ಟಿದ್ದಾರೆ ಹಮಾಸ್ ಹೇಳಿಕೊಂಡಿದೆ. ದಾಳಿಯಲ್ಲಿ ಸಾವಿರಾರು ಜನರು ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ನೀಡಲು ಕೂಡ ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ತಿಳಿಸಿದೆ.ಈ ನಡುವೆ ಇಸ್ರೇಲ್ ಹಾಗೂ ಹಮಾಸ್ ಉಗ್ರರ ನಡುವಿನ ಯುದ್ಧ ಆರಂಭವಾಗಿ ಇಂದಿಗೆ 20 ದಿನಗಳು ಕಳೆದಿದ್ದು, ದಾಳಿಯಲ್ಲಿ ಇದುವರೆಗೆ ಇದುವರೆಗೆ 7,100 ಜನ ಮೃತಪಟ್ಟಿದ್ದಾರೆ ಎಂದು ವರದಿಗಳಿಂದ ತಿಳಿದುಬಂದಿದೆ. ಇಸ್ರೇಲ್‌ ಮೇಲೆ ಹಮಾಸ್‌ ಮಾಡಿದ ದಾಳಿಯಿಂದ ಇದುವರೆಗೆ 1,400 ಮಂದಿ ಮೃತಪಟ್ಟಿದ್ದಾರೆ. ಮತ್ತೊಂದೆಡೆ, ಗಾಜಾ ನಗರದಲ್ಲಿ ಇಸ್ರೇಲ್‌ ಸತತ ದಾಳಿಗೆ 5,700ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ.

    ಗಾಜಾ ನಗರದಲ್ಲಂತೂ ಸಾವಿರಾರು ಜನ ಗಾಯಗೊಂಡಿದ್ದು, ಲಕ್ಷಾಂತರ ನಾಗರಿಕರು ನಿರಾಶ್ರಿತರಾಗಿದ್ದಾರೆ, ಈ ನಡುವೆ ಗಾಜಾ ಗಡಿಯಲ್ಲಿ ಸಾವಿರಾರು ಸೈನಿಕರು, ನೂರಾರು ಯುದ್ಧ ಟ್ಯಾಂಕರ್‌ಗಳನ್ನು ನಿಯೋಜಿಸಿರುವ ಇಸ್ರೇಲ್ ಇದೀಗ ಪೂರ್ಣ ಪ್ರಮಾಣದ ದಾಳಿ ನಡೆಸಲು ಸಜ್ಜಾಗಿದೆ. ಯಾವುದೇ ಕ್ಷಣದಲ್ಲಿ ಬೇಕಾದರೂ ಇಸ್ರೇಲ್‌ ಸೈನಿಕರು ಗಾಜಾ ನಗರದ ಮೇಲೆ ಪೂರ್ಣ ಪ್ರಮಾಣದ ದಾಳಿ ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಇದರ ಭೀತಿಯಿಂದಾಗಿಯೇ ಹಮಾಸ್‌ ಉಗ್ರರು ಇಸ್ರೇಲ್‌ನ ಇಬ್ಬರು ಒತ್ತೆಯಾಳುಗಳನ್ನು ಸೋಮವಾರ ಬಿಡುಗಡೆ ಮಾಡಿದ್ದರು. ಇಷ್ಟಾದರೂ ಕೆಲವು ಉಗ್ರರು ರಕ್ಕಸ ಕೃತ್ಯಗಳ ಮೂಲಕ ನಾಗರಿಕರನ್ನು ಹಿಂಸಿಸುತ್ತಿದ್ದಾರೆಂದು ಹೇಳಲಾಗುತ್ತಿದೆ. ಏತನ್ಮಧ್ಯೆ ಇಸ್ರೇಲ್​ ಹಾಗೂ ಹಮಾಸ್​ ನಡುವಿನ ನಿಲ್ಲದ ಯುದ್ಧದ ಬಗ್ಗೆ ವಿಶ್ವದ ದೊಡ್ಡಣ್ಣ ಅಮೆರಿಕಾ ಕಳವಳ ವ್ಯಕ್ತಪಡಿಸಿದೆ ನಿರಂತರವಾಗಿ ನಡೆಯುತ್ತಿರುವ ಬಾಂಬ್​ ದಾಳಿಗಳಿಂದ ಗಾಜಾದಲ್ಲಿ ಸಾವಿನ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಈ ಯುದ್ಧ ಆ ಪ್ರದೇಶದಲ್ಲಿ ವ್ಯಾಪಕ ಸಂಘರ್ಷವನ್ನು ಉಂಟು ಮಾಡಬಹುದು ಎಂದು ಹೇಳಿದೆಯಾದರೂ ಹಮಾಸ್ ಬಳಿ ಇರುವ ಒತ್ತೆಯಾಳೂಗಳ ಪೂರ್ಣ ಪ್ರಮಾಣದ ಬಿಡುಗಡೆಯಾಗದೆ ಯಾವುದೇ ಮಾತುಕತೆ ಅಸಾಧ್ಯವೆಂದು ಅಮೇರಿಕಾ ಅಧ್ಯಕ್ಷ ಜೋ ಬೈಡನ್ ಸ್ಪಷ್ಟಪಡಿಸಿದ್ದಾರೆ.

     

    Share Information
    Advertisement
    Click to comment

    Leave a Reply

    Your email address will not be published. Required fields are marked *