ವಿಶ್ವ ಮಾದಕ ವಸ್ತು ವಿರೋಧಿ ಸಪ್ತಾಹ ಜಾಥಾ ಉದ್ಘಾಟನೆ

ಉಡುಪಿ, ಜೂನ್ 26 : ಜಿಲ್ಲಾಡಳಿತ ಉಡುಪಿ ಜಿಲ್ಲೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಡುಪಿ, ಎಂ.ಜಿ.ಎಂ. ಕಾಲೇಜು ಉಡುಪಿ, ಮಹಾತ್ಮ ಗಾಂಧೀ ಸ್ಮಾರಕ ನಿಧಿ ಎಂ.ಜಿ.ಎಂ, ರಾಷ್ಟ್ರೀಯ ಸೇವಾ ಯೋಜನೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ಮಾದಕ ವಸ್ತು ವಿರೋಧಿ ಸಪ್ತಾಹದ ಅಂಗವಾಗಿ, ಉಡುಪಿಯ ಬೋರ್ಡ್ ಹೈಸ್ಕೂಲ್‍ನಿಂದ ಎಂಜಿಎಂ ಕಾಲೇಜುವರೆಗೆ ನಡೆದ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಷಾ ಜೇಮ್ಸ್ ಬುಧವಾರ ಚಾಲನೆ ನೀಡಿದರು.

ಜಾಥಾ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಇದರ ಕಾರ್ಯದರ್ಶಿ ರೋಹಿಣಿ ಕೆ, ಜಿಲ್ಲಾ ವಾರ್ತಾಧಿಕಾರಿ ಬಿ.ಎ. ಖಾದರ್ ಷಾ, ಎಂಜಿಎಂ ಕಾಲೇಜಿನ ಪ್ರಾಂಶುಪಾಲ ಎಂ.ಜಿ.ವಿಜಯ್, ಎಂಜಿಎಂ ಕಾಲೇಜಿನ ಗಾಂಧೀ ಅಧ್ಯಯನ ಸಂಸ್ಥೆಯ ಸಂಶೋಧಕ ವಿನೀತ್ ರಾವ್, ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಅವಿನಾಶ್ ಮತ್ತಿತರರು ಉಪಸ್ಥಿತರಿದ್ದರು.

2 Shares

Facebook Comments

comments