LATEST NEWS
ಉಡುಪಿಯಲ್ಲಿ ಕಾಟಾಚಾರಕ್ಕೆ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಉಡುಪಿಯಲ್ಲಿ ಕಾಟಾಚಾರಕ್ಕೆ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆ
ಉಡುಪಿ ಜೂನ್ 21: ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಉಡುಪಿಯಲ್ಲಿ ಕಾಟಾಚಾರಕ್ಕೆ ಎಂಬಂತೆ ನಡೆಸಲಾಗಿದೆ. ಜಿಲ್ಲಾಡಳಿತ ನಡೆಸುವ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಯೇ ಗೈರು ಹಾಜರಾಗಿದ್ದು ವಿಶೇಷವಾಗಿತ್ತು.
ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ದೇಶದಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದೆ. ದೇಶದ ಪ್ರತಿಯೊಂದು ಜಿಲ್ಲೆಗಳಲ್ಲೂ ಜಿಲ್ಲಾಡಳಿತ ಯೋಗ ದಿನಾಚರಣೆಯಲ್ಲಿ ಹಮ್ಮಿಕೊಂಡಿದೆ.

ಆದರೆ ಉಡುಪಿ ಜಿಲ್ಲೆಯಲ್ಲಿ ಮಾತ್ರ ಕಾಟಾಚಾರಕ್ಕೆ ಎಂಬಂತೆ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಉಡುಪಿಯ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಯೋಗ ದಿನಾಚರಣೆಗೆ ಹಿರಿಯ ಅಧಿಕಾರಿಗಳ ನಿರ್ಲಕ್ಷ್ಯವಹಿಸಿದ್ದು, ಜಿಲ್ಲಾಡಳಿತದ ಕಾರ್ಯಕ್ರಮ ಕ್ಕೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಗೈರಾಗಿದ್ದರು.ಉಡುಪಿ ಜಿ.ಪಂ ಕಾರ್ಯ ನಿರ್ವಹಣಾಧಿಕಾರಿ ಸಿಂಧು ರೂಪೇಶ್, ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್ ಗೈರಾಗಿದ್ದರು.