LATEST NEWS
ಜಿಲ್ಲೆಯಲ್ಲಿ ಮಳೆಯ ನಡುವೆಯೂ ನಡೆದ ವಿಶ್ವಯೋಗ ದಿನಾಚರಣೆ

ಜಿಲ್ಲೆಯಲ್ಲಿ ಮಳೆಯ ನಡುವೆಯೂ ನಡೆದ ವಿಶ್ವಯೋಗ ದಿನಾಚರಣೆ
ಮಂಗಳೂರು ಜೂನ್ 21 : ವಿಶ್ವಯೋಗ ದಿನಾಚರಣೆ ಅಂಗವಾಗಿ ಮಂಗಳೂರಿನಲ್ಲಿ ಯೋಗ ದಿನಾಚರಣೆಯಲ್ಲಿ ಅದ್ದೂರಿಯಾಗಿ ಆಚರಿಸಲಾಗಿದೆ. ಮಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಹೊರಾಂಗಣದಲ್ಲಿ ನಡೆಯಬೇಕಿದ್ದ ಯೋಗ ದಿನಾಚರಣೆಯನ್ನು ಮಳೆ ಹಿನ್ನಲೆ ಒಳಾಂಗಣಕ್ಕೆ ಶಿಫ್ಟ ಮಾಡಲಾಗಿತ್ತು.
ಮಂಗಳೂರಿನ ಮಂಗಳಾ ಒಳಾಂಗಣ ಕ್ರೀಡಾಂಗಣದಲ್ಲಿ ಇಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲಾಡಳಿತಯ ಸೇರಿದಂತೆ ಆಯುಷ್ ಇಲಾಖೆಯಿಂದ ಆಯೋಜಿಸಲಾಗಿದ್ದ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್, ಸಂಸದ ನಳಿನ್ ಕುಮಾರ್ ಕಟೀಲ್, ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಯೋಗಭ್ಯಾಸದಲ್ಲಿ ಭಾಗಿಯಾದರು. ಕಾರ್ಯಕ್ರಮದಲ್ಲಿ ನಗರದ ನೂರಾರು ಯೋಗಾಸಕ್ತರು ಪಾಲ್ಗೊಂಡಿದ್ದರು.

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿಯೂ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು. ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಮತ್ತು ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ವತಿಯಿಂದ 4 ನೇ ವಿಶ್ವ ಯೋಗ ದಿನಾಚರಣೆ ಅಮೃಥವರ್ಷಿಣಿ ಸಭಾಗಣದಲ್ಲಿ ಇಂದು ನಡೆಯಿತು. ಈ ಸಂರ್ಭದಲ್ಲಿ 2 ಸಾವಿರಕ್ಕೂ ಅಧಿಕ ಯೋಗಾಸಕ್ತರಿಂದ ಯೋಗ ಪ್ರಾತ್ಯಕ್ಷಿಕೆ ನಡೆಯಿತು.