LATEST NEWS
ಮುಂದಿನ 2 ದಿನ ಮಂಗಳೂರು ಸೇರಿದಂತೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಇಂಟರ್ ನೆಟ್ ಸೇವೆ ಬಂದ್

ಮುಂದಿನ 2 ದಿನ ಮಂಗಳೂರು ಸೇರಿದಂತೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಇಂಟರ್ ನೆಟ್ ಸೇವೆ ಬಂದ್
ಮಂಗಳೂರು ಡಿಸೆಂಬರ್ 19: ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಮಂಗಳೂರಿನಲ್ಲಿ ಗಲಭೆ ಘರ್ಷಣೆ ನಡೆದ ಹಿನ್ನಲೆಯಲ್ಲಿ ಮಂಗಳೂರು ಸೇರಿದಂತೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮುಂದಿನ 48 ಗಂಟೆಗಳ ಕಾಲ ಇಂಟರ್ ನೆಟ್ ಸೇವೆಗಳನ್ನು ಸ್ಥಬ್ದಗೊಳಿಸಲಾಗಿದೆ.
ಮಂಗಳೂರಿನಲ್ಲಿ ಪೌರತ್ವ ಮಸೂದೆ ವಿರೋಧಿಸಿ ಇಂದು ನಡೆದ ಗಲಭೆಗಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಭಟನೆಗೆ ಕರೆ ಕೊಟ್ಟಿರುವುದು ಪ್ರಮುಖ ಕಾರಣವಾಗಿದ್ದು, ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಕೂಡ ಪ್ರತಿಭಟನೆಗೆ ಆಗಮಿಸಿ ನಂತರ ಪೊಲೀಸ್ ರೊಂದಿಗೆ ಘರ್ಷಣೆಗೆ ಕಾರಣವಾಗಿತ್ತು.

ಈ ಹಿನ್ನಲೆಯಲ್ಲಿ ಮಂಗಳೂರು ಪೊಲೀಸ್ ಆಯುಕ್ತ ಡಾ. ಹರ್ಷ ಸಾಮಾಜಿಕ ಜಾಲತಾಣಗಳಲ್ಲಿ ಗಲಭೆ ಕುರಿತಂತೆ ಸುದ್ದಿ, ಗಲಭೆಯ ದೃಶ್ಯಗಳನ್ನು ವೈರಲ್ ಮಾಡಲಾಗುತ್ತಿದ್ದು ಇದು ಮತ್ತೆ ಗಲಭೆಗೆ ಕಾರಣವಾಗಲಿರುವ ಹಿನ್ನಲೆಯಲ್ಲಿ ನಗರ ಹಾಗೂ ಜಿಲ್ಲೆಯಾದ್ಯಂತ ಇಂಟರ್ ನೆಟ್ ಸೇವೆಗಳನ್ನು ಸ್ಥಬ್ದಗೊಳಿಸಲು ಕೋರಿಕೆ ಸಲ್ಲಿಸಿದ್ದರು.
ಈ ಹಿನ್ನಲೆಯಲ್ಲಿ ರಾಜ್ಯ ಗೃಹ ಕಾರ್ಯದರ್ಶಿಗಳ ಆದೇಶದ ಮೇರೆಗೆ ಮುಂದಿನ 48 ಗಂಟೆಗಳ ಕಾಲ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಇಂಟರ್ ನೆಟ್ ಸೇವೆ ಸ್ತಬ್ದಗೊಳಲು ಸಂಬಂಧಪಟ್ಟ ಟೆಲಿಕಾಂ ಆಪರೇಟರ್ ಗಳಿಗೆ ಆದೇಶಿಸಲಾಗಿದೆ.