Connect with us

KARNATAKA

ರಾತ್ರೋ ರಾತ್ರಿ ಬೆಂಗಳೂರು ಪೊಲೀಸ್ ಕಮಿಷನರ್ ಆಗಿ ಸೀಮಂತ್ ಕುಮಾರ್ ಸಿಂಗ್ ಅಧಿಕಾರ ಸ್ವೀಕಾರ

ಬೆಂಗಳೂರು ಜೂನ್ 06: ಚಿನ್ನಸ್ವಾಮಿ ಸ್ಟೆಡಿಯಂ ನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಈಗ ಪೊಲೀಸರ ತಲೆದಂಡಲಾಗಿದೆ. ಈ ಪ್ರಕರಣ ಸಂಬಂಧ ರಾಜ್ಯ ಸರಕಾರ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದೆ. ಅಮಾನತು ಆದೇಶದ ಕಲವೇ ಗಂಟೆಗಳಲ್ಲಿ ರಾಜ್ಯ ಸರಕಾರ ಸೀಮಂತ್ ಕುಮಾರ್ ಸಿಂಗ್ ಅವರನ್ನು ಬೆಂಗಳೂರಿಗೆ ನೂತನ ಪೊಲೀಸ್ ಕಮಿಷನರ್ ಆಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.


ಬಿಹಾರ ಮೂಲದವರಾಗಿರುವ ಸೀಮಂತ್ ಕುಮಾರ್ ಸಿಂಗ್ 1996 ಬ್ಯಾಚ್‌ನ ಐಪಿಎಸ್ ಅಧಿಕಾರಿ. ಈ ಹಿಂದೆ ಬೆಂಗಳೂರು ಪೂರ್ವ ವಲಯ ಹೆಚ್ಚುವರಿ ಆಯುಕ್ತರಾಗಿ, ಎಸಿಬಿಯಲ್ಲಿ ಎಡಿಜಿಪಿಯಾಗಿ, ಕೆಎಸ್‌ಆರ್ ಪಿ ಎಡಿಜಿಪಿಯಾಗಿ ಕಾರ್ಯ ನಿರ್ವಹಿಸಿದ್ದರು. ಸದ್ಯ ಬಿಎಂಟಿಎಫ್ (ಬೆಂಗಳೂರು ಮಹಾನಗರ ಕಾರ್ಯಪಡೆ) ಎಡಿಜಿಪಿಯಾಗಿದ್ದ ಸೀಮಂತ್ ಕುಮಾರ್ ಸಿಂಗ್ ಇದೀಗ ಬೆಂಗಳೂರಿಗೆ 39ನೇ ನೂತನ ಕಮಿಷನರ್ ಆಗಿ ನೇಮಕಗೊಂಡಿದ್ದಾರೆ.

ಸೀಮಂತ್ ಕುಮಾರ್ ಸಿಂಗ್ ಮಂಗಳೂರು ನಗರಕ್ಕೆ ಕಮಿಷನರೇಟ್ ಬಂದ ಬಳಿಕ ಮೊದಲ ಪೊಲೀಸ್ ಕಮಿಷನರ್ ಆಗಿದ್ದರು. 2000ದಿಂದ 2004ರವರೆಗೆ ದಕ್ಷಿಣ ಕನ್ನಡ ಜಿಲ್ಲಾ ಎಸ್‌ಪಿಯಾಗಿಯೂ ಅವರು ಸೇವೆ ಸಲ್ಲಿಸಿದ್ದರು. ಆ ಬಳಿಕ 2014ರಲ್ಲಿ ಪಶ್ಚಿಮ ವಲಯದ ಐಜಿಪಿಯಾಗಿದ್ದರು. ಬೆಂಗಳೂರು ಕೇಂದ್ರ ವಿಭಾಗದ ಐಜಿಪಿಯಾಗಿದ್ದ ಸೀಮಂತ್ ಕುಮಾರ್ ಸಿಂಗ್ ಡಿಐಜಿ ಮತ್ತು ನಕ್ಸಲ್ ನಿಗ್ರಹ ಪಡೆ (ANF)ನ ಕಮಾಂಡರ್ ಆಗಿಯೂ ಕರ್ತವ್ಯ ನಿರ್ವಹಿಸಿದ್ದರು

Share Information
Continue Reading
Advertisement
Click to comment

Leave a Reply

Your email address will not be published. Required fields are marked *