ಮುಂದಿನ 24 ಗಂಟೆಗಳಲ್ಲಿ ಕರಾವಳಿಯಲ್ಲಿ ಗುಡುಗು ಸಹಿತ ಸಾಧಾರಣ ಮಳೆ ಸಾಧ್ಯತೆ – ಹಮವಾನ ಇಲಾಖೆ

ಮಂಗಳೂರು ಮಾರ್ಚ್ 26: ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿದ್ದ ಹಿನ್ನಲೆಯಲ್ಲಿ ರಾಜ್ಯದ ಕೆಲವೆಡೆ ಸಣ್ಣ ಪ್ರಮಾಣದಲ್ಲಿ ಮಳೆಯಾಗಿತ್ತು. ರಾಜ್ಯದಲ್ಲಿ ಬಹುತೇಕ ಪ್ರದೇಶಗಳಲ್ಲಿ ಬೆಸಿಗೆಯ ಪ್ರಕರ ಬಿಸಿಲು ಹೆಚ್ಚಾಗಿದೆ. ಕರಾವಳಿ ಭಾಗದಲ್ಲಿ ಸೋಮವಾರದಿಂದ ಸೆಕೆ ಹೆಚ್ಚಾಗಿದ್ದು. ಮಧ್ಯಾಹ್ನದ ವೇಳೆಗೆ ಮನೆಯಿಂದ ಹೊರಬರಲು ಹಿಂದೇಟು ಹಾಕುವ ರೀತಿಯಲ್ಲಿ ಬಿಸಿಲಿತ್ತು. ಇಂದು ಬೆಳಿಗ್ಗೆ ಮತ್ತು ಸಂಜೆ ಅಲ್ಲಲ್ಲಿ ಮೋಡ ಕವಿದ ವಾತಾವರಣವಿತ್ತು.

ಈ ನಡುವೆ ಮುಂದಿನ 24 ಗಂಟೆಗಳಲ್ಲಿ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಪ್ರಕಟಣೆ ತಿಳಿಸಿದೆ. ಅಲ್ಲದೆ ಮಲೆನಾಡು ಚಿಕ್ಕಮಗಳೂರು , ಶಿವಮೊಗ್ಗದಲ್ಲೂ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.

16 Shares

Facebook Comments

comments