Connect with us

KARNATAKA

ಚಂದ್ರಯಾನ 3ರ countdown ಗೆ ಧ್ವನಿಯಾಗಿದ್ದ ವಿಜ್ಞಾನಿ ವಲರ್ಮತಿ ಹೃದಯಾಘಾತದಿಂದ ನಿಧನ

ಶ್ರೀಹರಿಕೋಟ ಸೆಪ್ಟೆಂಬರ್ 04: ದೇಶದ ಮಹತ್ಮಾಕಾಂಕ್ಷೆಯ ಚಂದ್ರಯಾನ 3 ರ ಉಡಾವಣೆ ಸಂದರ್ಭದ ಸಮಯ ಕ್ಷಣಗಣೆನೆಗೆ ಧ್ವನಿಯಾಗಿದ್ದ ಮಹಿಳಾ ವಿಜ್ಞಾನಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ವಿಜ್ಞಾನಿ ವಲರ್ಮತಿ ಅವರು ಹೃದಯಾಘಾತದಿಂದ ಶನಿವಾರ ಮೃತಪಟ್ಟಿದ್ದಾರೆ.


ಮೂಲತಃ ತಮಿಳುನಾಡಿನ ಅರಿಯಾಲೂರ್‌ನವರಾದ ಇವರು, ದೇಶದ ಮೂರನೇ ಚಂದ್ರಯಾನ-3ರ ಉಡಾವಣೆಯಲ್ಲಿ ಹಿನ್ನೆಲೆ ಧ್ವನಿ ನೀಡಿದ್ದರು. ಇಸ್ರೊ ಮಾಜಿ ನಿರ್ದೇಶಕ ಪಿ.ವಿ ವೆಂಕಟಕೃಷ್ಣನ್‌ ಅವರು ಟ್ವಿಟರ್‌ ಖಾತೆಯಲ್ಲಿ, ‘ಶ್ರೀಹರಿಕೋಟಾದಿಂದ ಇಸ್ರೊ ಭವಿಷ್ಯದ ಮಿಷನ್‌ಗಳ ಕ್ಷಣಗಣನೆಗೆ ವಲರ್ಮತಿ ಮೇಡಂ ಅವರ ಧ್ವನಿ ಇರುವುದಿಲ್ಲ. ಚಂದ್ರಯಾನ-3ರ ಅಂತಿಮ ಕ್ಷಣಗಣನೆ ಅವರ ಕೊನೆಯ ಘೋಷಣೆಯಾಗಿತ್ತು. ಅನಿರೀಕ್ಷಿತ ನಿಧನ. ತುಂಬಾ ದುಃಖವಾಗುತ್ತಿದೆ. ಪ್ರಣಾಮಗಳು’ ಎಂದು ಬರೆದುಕೊಂಡಿದ್ದಾರೆ.

31 ಜುಲೈ 1959 ರಂದು ಜನಿಸಿದ ವಲರ್ಮತಿ ಅವರು 1984 ರಲ್ಲಿ ಇಸ್ರೋಗೆ ಸೇರಿ, ‌ಹಲವಾರು ಕಾರ್ಯಾಚರಣೆಗಳಲ್ಲಿ ಭಾಗವಹಿಸಿದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *