BELTHANGADI
ಮಂಗಳೂರು, ಉಡುಪಿಯಲ್ಲಿ ಬೆಳ್ಳಂಬೆಳಗ್ಗೆ ಆಭರಣ ಮಳಿಗೆಗಳ ಮೇಲೆ ಐಟಿ ದಾಳಿ..!
ಮಂಗಳೂರು/ಉಡುಪಿ : ಮಂಗಳೂರು, ಉಡುಪಿಯಲ್ಲಿ ಬೆಳ್ಳಂಬೆಳಗ್ಗೆ ಆಭರಣ ಮಳಿಗೆಗಳ ಮೇಲೆ ಐಟಿ ದಾಳಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಮಣ್ಣಗುಡ್ಡ, ಮಂಗಳೂರು ನಗರದ ಶಿವಭಾಗ್ ಹಾಗೂ ಉಡುಪಿ ಜಿಲ್ಲೆಯಲ್ಲಿ ಏಕಾ ಕಾಲದಲ್ಲಿ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ನಿನ್ನೆ ಅಷ್ಟೇ ಕರ್ನಾಟಕದ 75 ಕಡೆಗಳಲ್ಲಿ ರಾಜ್ಯ ಲೋಕಾಯುಕ್ತ ದಾಳಿಯಾಗಿತ್ತು. ಇದರ ಬೆನ್ನಲ್ಲೇ ಇಂದು ಬೆಳ್ಳಂಬೆಳಗ್ಗೆ ಕರಾವಳಿ ಭಾಗದಲ್ಲಿ ಐಟಿ ದಾಳಿಯಾಗಿದೆ
ಉಡುಪಿ, ಕಾರ್ಕಳ, ಕುಂದಾಪುರ, ಪಡುಬಿದ್ರಿ, ಬ್ರಹ್ಮಾವರ, ಸೇರಿದಂತೆ ಹಲವೆಡೆ ಚಿನ್ನದ ಅಂಗಡಿಗಳ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕರಾವಳಿಯ ಅನೇಕ ಭಾಗಗಳಲ್ಲಿ ತನ್ನ ಶೋರೂಮ್ ಹೊಂದಿರುವ ಪ್ರಸಿದ್ಧ ಚಿನ್ನದ ಮಳಿಗಳ ಮೇಲೆ ಏಕಕಾಲದಲ್ಲಿ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು ಇತ್ತೀಚಿನ ದಿನಗಳಲ್ಲಿ ಇದೇ ಮೊದಲ ಸಲವಾಗಿದ್ದು,ಅಧಿಕಾರಿಗಳ ತಂಡ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನೀರೀಕ್ಷಿಸಲಾಗುತ್ತಿದೆ.
You must be logged in to post a comment Login