KARNATAKA
ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಸಹೋದರನ ಮನೆ ಮೇಲೆ ಐಟಿ ದಾಳಿ: ಮಾವಿನ ಹಣ್ಣಿನ ಬಾಕ್ಸ್‌ನಲ್ಲಿದ್ದ 1 ಕೋಟಿ ರೂ. ವಶ

ಮೈಸೂರು, ಮೇ 03: ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಸಹೋದರನ ಮನೆ ಮೇಲೆ ಐಟಿ ದಾಳಿ ನಡೆದಿದ್ದು, 1 ಕೋಟಿ ನಗದು ವಶಪಡಿಸಿಕೊಂಡಿದ್ದಾರೆ.
ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮೈಸೂರು ನಗರದ ಕೆ.ಸುಬ್ರಹ್ಮಣ್ಯ ರೈ ಎಂಬುವರ ಮನೆ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಅಂಗಳದ ಮರದಲ್ಲಿ ಬಚ್ಚಿಟ್ಟಿದ್ದ ಮಾವಿನ ಹಣ್ಣಿನ ಬಾಕ್ಸ್‌ನಲ್ಲಿದ್ದ 1 ಕೋಟಿ ರೂ ನಗದು ವಶಕ್ಕೆ ಪಡೆದಿದ್ದಾರೆ. ಚುನಾವಣಾ ಸಂದರ್ಭದಲ್ಲಿ ಮೈಸೂರು ಜಿಲ್ಲೆಯಲ್ಲಿ ಇಷ್ಟೊಂದು ದೊಡ್ಡ ಮೊತ್ತದ ಹಣ ಜಪ್ತಿ ಮಾಡಿರುವುದು ಇದೇ ಮೊದಲು’ ಎಂದು ಮೂಲಗಳು ತಿಳಿಸಿವೆ.

ಈ ಬಗ್ಗೆ ಕಾಂಗ್ರೆಸ್ ಸಭೆಯಲ್ಲಿ ಪ್ರತಿಕ್ರಿಯಿಸಿದ ಅವರು, ನಾನು ಚುನಾವಣಾ ಪ್ರಚಾರದಲ್ಲಿದ್ದ ವೇಳೆ ನನ್ನ ಮನೆ ಮತ್ತು ಕಚೇರಿಗೆ ದಾಳಿ ನಡೆಸಿದ ಅಧಿಕಾರಿಗಳು ಹಣಕ್ಕಾಗಿ ಜಾಲಾಡಿದ್ದು, ಮನೆಯಲ್ಲಿ ಕೇವಲ 30 ರೂ. ಮತ್ತು ಕಚೇರಿಯಲ್ಲಿ ಸಿಬ್ಬಂದಿಗಳಿಗೆ ವೇತನ ನೀಡಲು ಇಟ್ಟಿದ್ದ 1.80 ಲಕ್ಷ ರೂ. ಸಿಕ್ಕಿದ್ದು, ಅದನ್ನು ಕೊಂಡೊಯ್ದಿದ್ದಾರೆ. ಸತತ ಎರಡು ದಿನಗಳ ಕಾಲ ದಾಳಿ ನಡೆಸಿದ್ದಾರೆ. ನನ್ನನ್ನು ಹೇಗಾದರೂ ಮಾಡಿ ಜೈಲಿಗಟ್ಟಬೇಕು ಎಂದು ಈ ರೀತಿ ಮಾಡಲಾಗಿದೆ.
ಆದರೆ ದೇವರು ನನ್ನ ಕೈ ಬಿಟ್ಟಿಲ್ಲ. ನಾನು ಪ್ರಮಾಣಿಕವಾಗಿ ಕೆಲಸ ಮಾಡುತ್ತಿದ್ದು, ಕೋಟ್ಯಾಂತರ ರೂ. ಆದಾಯ ತೆರಿಗೆ ಕಟ್ಟುತ್ತಿದ್ದೇನೆ. ದೇವರ ಮತ್ತು ಜನರ ಆಶೀರ್ವಾದ ಇರುವರೆಗೂ ನನ್ನನ್ನು ಈ ರೀತಿಯಾಗಿ ಹಣಿಯಲು ಯಾರಿಂದಲೂ ಸಾಧ್ಯವಿಲ್ಲ ಎಂದರು.
ಬಿಜೆಪಿಯವರು ಅಶೋಕ್ ರೈ ಯನ್ನು ಹೇಗಾದರೂ ಮಾಡಿ ಸೋಲಿಸಬೇಕು ಮತ್ತು ನನ್ನ ಆತ್ಮಸ್ಥೈರ್ಯ ಕುಗ್ಗಿಸಲು ನನ್ನ ಮನೆಗೆ ಐಟಿ ದಾಳಿ ನಡೆಸಿದ್ದು, ಇಂತಹ ಬೆದರಿಕೆಗಳಿಗೆ ನಾನು ಜಗ್ಗುವುದಿಲ್ಲ ಎಂದರು.