
ಮಂಗಳೂರು ಜೂನ್ 02: ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು ಕರಾವಳಿಯಿಂದ ಐವನ್ ಡಿಸೋಜಾ ಅವರಿಗೆ ಮತ್ತೊಮ್ಮೆ ಅವಕಾಶ ಸಿಕ್ಕಿದ್ದು, ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ 7 ಮಂದಿ ಸ್ಪರ್ಧಾ ಕಣದಲ್ಲಿದ್ದಾರೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 137 ಸ್ಥಾನಗಳನ್ನು ಗೆದ್ದಿದ್ದು ಇದರ ಆಧಾರದ ಮೇಲೆ ಒಟ್ಟು 11ರಲ್ಲಿ ಏಳು ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲುವ ಅವಕಾಶವಿದ್ದು ಆ ಸ್ಥಾನಗಳಿಗೆ ಇದೀಗ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಅದರಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ, ಹಾಲಿ ಸಚಿವ ಎನ್.ಎಸ್.ಬೋಸರಾಜು, ಸಿಎಂ ರಾಜಕೀಯ ಕಾರ್ಯದರ್ಶಿ ಡಾ.ಕೆ ಗೋವಿಂದರಾಜು, ವಸಂತಕುಮಾರ್, ಜಗದೇವ್ ಗುತ್ತೇದಾರ್, ಐವನ್ ಡಿಸೋಜಾ ಮತ್ತು ಬಿಲ್ಕಿಸ್ ಬಾನೊ ಅವರನ್ನು ಕಾಂಗ್ರೆಸ್ ಅಭ್ಯರ್ಥಿಗಳನ್ನಾಗಿ ಘೋಷಿಸಲಾಗಿದೆ.





