Connect with us

  BANTWAL

  ಮಂಗಳೂರು: ಜ. 22 ರ ರಾಮಮಂದಿರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಯೋಧ್ಯೆಗೆ ಹೊರಟ RSS ಮುಖಂಡ ಕಲ್ಲಡ್ಕ ಡಾ.ಪ್ರಭಾಕರ್ ಭಟ್‌..!

  ಮಂಗಳೂರು : ಆರ್‌ ಎಸ್‌ ಎಸ್ ಮುಖಂಡರು ಹಾಗೂ ವಿವೇಕಾನಂದ ವಿದ್ಯಾವರ್ಧಕ ಸಂಘ ಇದರ ಸಂಚಾಲಕರಾದ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ರವರು ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯುವ ರಾಮಮಂದಿರದ ಪ್ರಾಣ ಪ್ರತಿಷ್ಠೆಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

  ಈ ಹಿನ್ನೆಲೆಯಲ್ಲಿ ಶುಕ್ರವಾರ ಮಂಗಳೂರಿನಿಂದ ಉತ್ತರ ಪ್ರದೇಶಕ್ಕೆ ಡಾ. ಪ್ರಭಾಕರ್ ಭಟ್ ಪ್ರಯಾಣ ಬೆಳೆಸಿದ್ದಾರೆ. ಮಂಗಳೂರು ರೈಲ್ವೆ ನಿಲ್ದಾಣದಲ್ಲಿ ವಿಶ್ವ ಹಿಂದೂ ಪರಿಷತ್ ಮುಖಂಡರುಗಳು ಉಪಸ್ಥಿತರಿದ್ದು ಬೀಳ್ಕೊಡಲಾಯಿತು. ವಿಶ್ವ ಹಿಂದೂ ಪರಿಷದ್ ಮಂಗಳೂರು ಜಿಲ್ಲಾಧ್ಯಕ್ಷರು ಎಚ್ ಕೆ ಪುರುಷೋತ್ತಮ್, ಜಿಲ್ಲಾ ಉಪಾಧ್ಯಕ್ಷರುಗಳಾದ ಮನೋಹರ್ ಸುವರ್ಣ, ಹರೀಶ ಶೇಟ್, ಕದ್ರಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ರಾಜೇಶ್ ಮತ್ತು ಬಜರಂಗದಳ ಕಾರ್ಯಕರ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

  Share Information
  Advertisement
  Click to comment

  You must be logged in to post a comment Login

  Leave a Reply