Connect with us

KARNATAKA

ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಸೇರಿದ ಜಗದೀಶ ಶೆಟ್ಟರ್‌!

ಬೆಂಗಳೂರು, ಎಪ್ರಿಲ್ 17: ಬಿಜೆಪಿಯ ಹಿರಿಯ ನಾಯಕ ಜಗದೀಶ ಶೆಟ್ಟರ್‌ ಅವರು ಸೋಮವಾರ ಕಾಂಗ್ರೆಸ್‌ ಪಕ್ಷ ಸೇರಿದ್ದಾರೆ.

ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಶೆಟ್ಟರ್ ಕಾಂಗ್ರೆಸ್ ಸೇರಿದರು.

ರಾಜ್ಯ ಕಾಂಗ್ರೆಸ್​ ಚುನಾವಣಾ ಉಸ್ತುವಾರಿ ರಣದೀಪ್​ ಸಿಂಗ್ ಸುರ್ಜೇವಾಲ, ಕೆ.ಸಿ.ವೇಣುಗೋಪಾಲ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿ ಹಲವರು ಉಪಸ್ಥಿತರಿದ್ದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *