FILM
ನಟ ಚೇತನ್ ವಿರುದ್ದ ಜಗ್ಗೇಶ್ ಆಕ್ರೋಶ – ನಾಯಿ ನರಿ ಬೊಗಳಿದರೆ ಇತಿಹಾಸ ಬದಲಾಗುವುದೇ….!!

ಬೆಂಗಳೂರು ಡಿಸೆಂಬರ್ 18: ಸದಾ ತಮ್ಮ ಹೇಳಿಕೆಗಳಿಂದ ವಿವಾದದಲ್ಲಿರುವ ನಟ ಚೇತನ್ ಇದೀಗ ನಾಡಪ್ರಭು ಕೆಂಪೇಗೌಡ ವಿಚಾರವಾಗಿ ಮಾಡಿರುವ ಟ್ವೀವ್ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಈ ಕುರಿತಂತೆ ನಟ ಜಗ್ಗೇಶ್ ಕೂಡ ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯೆ ನೀಡಿದ್ದು, ಪರೋಕ್ಷವಾಗಿ ಚೇತನ್ ಮೇಲೆ ಹರಿಹಾಯ್ದಿದ್ದಾರೆ.
ಕೆಂಪೇಗೌಡ ವಿಜಯನಗರ ಸಾಮ್ರಾಜ್ಯದ ಒಡೆಯನ ತೊಡೆಯ ಮೇಲೆ ಕೂತು ಬೆಳೆದ ಮಗು..ಮುಂದೆ ಸಾಮಾಜಿಕ ನ್ಯಾಯ ಎತ್ತಿ ಹಿಡಿದು ಬೆಂದಕಾಳೂರು ಬೆಳಗಿಸಿದ ಸಾರ್ವಭೌಮ.. ಇಂದಿನ ನಾಯಿ ನರಿ ಬೊಗಳಿದರೆ ಅವರ ಇತಿಹಾಸ ಬದಲಾಗುವುದೆ! ಚಿತ್ರರಂಗದಲ್ಲಿ ನೆಲೆಕಾಣದೆ ಚಾಪುಮೂಡಿಸಲು ಸಲಕರಣೆ ಸಿಗದ ಅಲೆಮಾರಿಗಳು ಬೊಗಳಿದರೆ ಇತಿಹಾಸ ಬದಲಾಗುತ್ತ? ಕಾನೂನಿದೆ ಎಚ್ಚರ..! ಎಂದು ಬರೆದುಕೊಂಡಿದ್ದಾರೆ.

ವಿವಾದಾತ್ಮಕ ಹೇಳಿಕೆಯ ಮೂಲಕವೇ ಸಾಕಷ್ಟು ಸದ್ದು ಮಾಡುತ್ತಿರುವ ನಟ ಚೇತನ್ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ನಟ ಚೇತನ್ ಅವರು ತಮ್ಮ ಸೋಷಿಯಲ್ ಮೀಡಿಯಾ ಪೇಜ್ ನಲ್ಲಿ ನಾಡಪ್ರಭು ಕೆಂಪೇಗೌಡರ ವಿರುದ್ಧ ಅವಮಾನ ಮಾಡುವಂತಹ ಪೋಸ್ಟ್ ಹಾಕಿದ್ದಾರೆ ಎನ್ನುವ ಕಾರಣಕ್ಕಾಗಿ ವಕೀಲ ಆರ್.ಎಲ್.ಎನ್ ಮೂರ್ತಿ ಎನ್ನುವವರು ಶೇಷಾದ್ರಿ ಪುರಂ ಪೊಲೀಸ್ ಠಾಣೆಯಲ್ಲಿ ಚೇತನ್ ವಿರುದ್ಧ ದೂರು ನೀಡಿದ್ದಾರೆ.
ಕೆಂಪೇಗೌಡ ಉಳಿಗಮಾನ್ಯ ಜಾತಿ ಲಾಬಿಗಳ ಪ್ರಭಾವದಿಂದ ಈಗ ಪ್ರಮುಖ ಕರ್ನಾಟಕದ ಐಕಾನ್ ಆಗಿರುವ ಅತ್ಯಲ್ಪ ಐತಿಹಾಸಿಕ ವ್ಯಕ್ತಿ. ಟಿಪ್ಪು ಸುಲ್ತಾನ್ ಒಬ್ಬ ಐತಿಹಾಸಿಕವಾಗಿ ಬಹಳ ಮಹತ್ವದ ವ್ಯಕ್ತಿ. ಅವರ ಜನ್ಮವು ಮುಸ್ಲಿಮರಾಗಿ ಅವರ ಇಂದಿನ ಮಾನ್ಯತೆಗೆ ಅಡ್ಡಿಯಾಗಿದೆ. ದುರಾದೃಷ್ಟವಶಾತ್ ಒಬ್ಬ ವ್ಯಕ್ತಿಯು ಹುಟ್ಟಿದ ಸಮುದಾಯಕ್ಕೆ ಅವನ/ಅವಳ ಸಾಮಾಜಿಕ ಕೊಡುಗೆಗಳಿಗಿಂತ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತಿದೆ ಎಂದು ಚೇತನ್ ಬರೆದಿದ್ದರು.