Connect with us

    LATEST NEWS

    ಕಂಬಳ ಮತ್ತು ಇನ್ನಿತರ ಸಾರ್ವಜನಿಕ ಸಮಾರಂಭದಲ್ಲಿ ಕೊರಗ ಜನಾಂಗದವರನ್ನು ಡೋಲು ಬಡಿಸಿ ಕುಣಿತಕ್ಕೆ ಬಳಸಿಕೊಳ್ಳುವುದು ನಿರ್ಬಂಧ

    ಮಂಗಳೂರು ಅಕ್ಟೋಬರ್ 17 – ಜಿಲ್ಲೆಯಲ್ಲಿ ದಸರಾ ಆಚರಣೆಯ ಸಮಯದಲ್ಲಿ ಬೇರೆ ಜಾತಿಯ ಜನಾಂಗದವರು ಕೊರಗ ಜನಾಂಗದವರ ವೇಷ ಧರಿಸಿ ಅಂಗಡಿ ಮನೆಗಳ ಮುಂದೆ ಕುಣಿದು ಜಾತಿ ನಿಂದನೆ ಮಾಡುವುದು ಮತ್ತು ಅಮವಾಸ್ಯೆ ದಿನಗಳಲ್ಲಿ ಕೊರಗ ಜನಾಂಗದವರ ಹೆಂಗಸರಿಗೆ ಉಗುರು ತಲೆಕೂದಲುಗಳನ್ನು ಊಟದಲ್ಲಿ ಹಾಕಿ ಉಣಲು ನೀಡುವುದು, ಬೇರೆ ಜನಾಂಗದವರ ಚಿಕ್ಕ ಮಕ್ಕಳಿಗೆ ಕಾಯಿಲೆ ಇದ್ದಾಗ ಕೊರಗ ಜನಾಂಗದ ಮಹಿಳೆಯನ್ನು ಕರೆದು ಆ ಮಗುವಿಗೆ ಹಾಲು ಉಣಿಸಲು ಬಳಸಿಕೊಂಡು ಮಗುವಿನ ಕಾಯಿಲೆಯನ್ನು ಕೊರಗ ಜನಾಂಗದವರಿಗೆ ಹರಡುವಂತೆ ಮಾಡುವುದು ನಿಷೇಧಿಸಲಾಗಿದೆ.


    ದಕ್ಷಿಣಕನ್ನಡ ಜಿಲ್ಲೆಯ ಜಾನಪದ ಕ್ರೀಡೆಯಾದ ಕಂಬಳದಲ್ಲಿ ಕಂಬಳದ ಹಿಂದಿನ ದಿನ ಕಂಬಳದ ಕೆರೆಯಲ್ಲಿ ಕುಪ್ಪಿಚೂರು, ಮುಳ್ಳು ಮುಂತಾದವುಗಳು ಇರುವ ಬಗ್ಗೆ ಕಂಬಳದ ಹಿಂದಿನ ದಿನ ಕಂಬಳದ ಕೆರೆಯಲ್ಲಿ ಕೊರಗ ಜನಾಂಗದವರನ್ನು ಬಳಸಿಕೊಳ್ಳುವುದು, ಜಾತ್ರೆ, ಕಂಬಳ ಮತ್ತು ಇನ್ನಿತರ ಸಾರ್ವಜನಿಕ ಸಮಾರಂಭಗಳಲ್ಲಿ ಕೊರಗ ಜನಾಂಗದವರನ್ನು ಡೋಲು ಬಡಿಸಿ ಕುಣಿತಕ್ಕೆ ಬಳಸಿಕೊಳ್ಳುವುದು ನಿರ್ಬಂಧಿಸಲಾಗಿದೆ.

    ಬೇರೆ ಜನಾಂಗದವರ ಹೆಂಗಸರಿಗೆ ಸೀಮಂತದ ದಿನ ಹೆಂಗಸಿನ ಸೀಮಂತದ ಎಂಜಲು ಊಟವನ್ನು ಕೊರಗ ಜನಾಂಗದ ಮಹಿಳೆಯನ್ನು ಕರೆದು ಎಂಜಲು ಊಟ ಮಾಡಿ ಸೀಮಂತಳ ಮೇಲಿರುವ ದೃಷ್ಟಿಯನ್ನು ತೆಗೆಯಲು ಬಳಸಿಕೊಳ್ಳುವುದು ನಿಷೇಧಿಸಲಾಗಿದೆ.
    ಈ ಎಲ್ಲ ಚಟುವಟಿಕೆಗಳು ಕೊರಗರ ಅಜಲು ಪದ್ದತಿ ನಿಷೇಧ ಕಾಯ್ದೆಯಡಿ ಬರುವುದರಿಂದ ಇಂತಹ ಆಚರಣೆಗಳು ಕಂಡು ಬಂದಲ್ಲಿ ಅಂತಹ ಪ್ರಕರಣಗಳನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲೆ ದೌರ್ಜನ್ಯ ನಿಯಮದ ಆಧಿನಿಯಮ 1989ರ ಅಡಿಯಲ್ಲಿ ನೊಂದಾಯಿಸಿ ಕಾನೂನು ಕ್ರಮ ಜರುಗಿಸಲಾಗುವುದು. ಅಲ್ಲದೆ 5 ರಿಂದ 6 ವರ್ಷಗಳವರೆಗೆ ಕಾರಾಗೃಹವಾಸ ಮತ್ತು ರೂ. 5000 ದಂಡ ವಿಧಿಸಲಾಗುವುದು. ದಸರಾ ಹಬ್ಬಗಳ ಸಮಯದಲ್ಲಿ ಇಂತಹ ಪ್ರಸಂಗಗಳು ಕಂಡು ಬಂದಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ತಿಳಿಸಲು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು(ಗ್ರೇಡ್-1) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *