Connect with us

    LATEST NEWS

    ನೈಜ ಆರೋಪಿ ಬಂಧಿಸಿ…ಯಾರ‍್ಯಾರನ್ನೋ ಹಿಡಿಯೋ ಅಗತ್ಯವಿಲ್ಲ – ಜಲೀಲ್ ಸಹೋದರ ಮಹಮ್ಮದ್

    ಮಂಗಳೂರು ಡಿಸೆಂಬರ್ 25: ಸುರತ್ಕಲ್ ನಲ್ಲಿ ನಿನ್ನೆ ದುಷ್ಕರ್ಮಿಗಳಿಂದ ಚೂರಿ ಇರಿತಕ್ಕೊಳಗಾಗಿ ಸಾವನಪ್ಪಿರುವ ಜಲೀಲ್ ಯಾವುದೇ ಗಲಾಟೆಗೆ ಹೋಗದ ಬಡಪಾಯಿಯಾಗಿದ್ದು, ರಾಜಕಾರಣಕ್ಕಾಗಿ ಆತನನ್ನು ಕೊಲೆ ಮಾಡಿದ್ದಾರೆ ಎಂದು ಮೃತ ಜಲೀಲ್ ಸಹೋದರ ಮಹಮ್ಮದ್ ಆರೋಪಿಸಿದ್ದಾರೆ.


    ಆಸ್ಪತ್ರೆ ಬಳಿ ಮಾತನಾಡಿದ ಅವರು, ನಾವು ಮನೆಯಲ್ಲಿ ಇದ್ದ ವೇಳೆ ಜಲೀಲ್ ಕೊಲೆಯಾಗಿದೆ. ಆದರೆ ಅವನು ಯಾವುದೇ ಗಲಾಟೆಗೆ ಹೋಗದ ಬಡಪಾಯಿಯಾಗಿದ್ದು, ಬೆಳಿಗ್ಗೆ ಅಂಗಡಿಗೆ ಬಂದು ವ್ಯವಹಾರ ಮಾಡಿ ರಾತ್ರಿ ಮನೆಗೆ ಹೋಗುತ್ತಿದ್ದ. ಆತ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಎಲ್ಲರಿಗೂ ಬೇಕಾದವನಾಗಿದ್ದ. ಯಾವುದೇ ಚಟುವಟಿಕೆಗೆ ಹೋಗದ ಆತ ಶಾಂತಿಪ್ರಿಯನಾಗಿದ್ದ. ಯಾರ ಜೊತೆಗೂ ಜೋರಾಗಿಯೂ ಮಾತನಾಡದಂತ ಅವನನ್ನೇ ಬಿಡಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.


    ಅವನಿಗೆ ಶತ್ರುಗಳು ಅಂತ ಯಾರೂ ಇರಲೇ ಇಲ್ಲ. ಇದು ರಾಜಕಾರಣಕ್ಕಾಗಿ ಅಮಾಯಕನ ಕೊಲೆಯಾಗಿದೆ. ನಮಗೆ ಸರ್ಕಾರ ನ್ಯಾಯ ಕೊಡಬೇಕು, ನೈಜ ಆರೋಪಿ ಬಂಧಿಸಬೇಕು. ಯಾರ‍್ಯಾರನ್ನೋ ಹಿಡಿಯೋ ಅಗತ್ಯವಿಲ್ಲ, ನೈಜ ಆರೋಪಿಗಳನ್ನು ಹಿಡಿಯಿರಿ ಎಂದು ಒತ್ತಾಯಿಸಿದರು.

    Share Information
    Advertisement
    Click to comment

    You must be logged in to post a comment Login

    Leave a Reply