Connect with us

LATEST NEWS

ಜಮ್ಮು–ಕಾಶ್ಮೀರ: ಪುಲ್ವಾಮಾದಲ್ಲಿ ಮೂವರು ಉಗ್ರರ ಹತ್ಯೆ, ಒಬ್ಬ ಯೋಧ ಹುತಾತ್ಮ

ಶ್ರೀನಗರ: ಜಮ್ಮು–ಕಾಶ್ಮೀರದ ಪುಲ್ವಾಮಾದಲ್ಲಿ ಭದ್ರತಾಪಡೆಗಳು ಮತ್ತು ಉಗ್ರರ ನಡುವೆ ಶುಕ್ರವಾರ ತಡರಾತ್ರಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರು ಹತರಾಗಿದ್ದಾರೆ. ಒಬ್ಬ ಯೋಧ ಹುತಾತ್ಮರಾಗಿದ್ದಾರೆ.ಪುಲ್ವಾಮಾದ ಝಡೂರಾ ಪ್ರದೇಶದಲ್ಲಿ ರಾತ್ರಿ 1 ಗಂಟೆ ವೇಳೆಗೆ ಚಕಮಕಿ ನಡೆದಿದೆ.

ಉಗ್ರರಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.ಉಗ್ರರು ಅವಿತಿರುವ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸಿವೆ. ಈ ವೇಳೆ ಉಗ್ರರು ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ಯೋಧರೂ ಪ್ರತಿ ದಾಳಿ ನಡೆಸಿದ್ದಾರೆ. ಈ ವೇಳೆ ಒಬ್ಬ ಯೋಧರ ಗಂಭೀರವಾಗಿ ಗಾಯಗೊಂಡಿದ್ದಾರೆ. ತಲೆಮರೆಸಿಕೊಂಡಿರುವ ಉಗ್ರರಿಗಾಗಿ ಶೋಧ ಕಾರ್ಯ ಪ್ರಗತಿಯಲ್ಲಿದೆ ಎಂದುಪೊಲೀಸರುತಿಳಿಸಿದ್ದಾರೆ.

ಗುಂಡಿನಚಕಮಕಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯೋಧ ಬಳಿಕ ಮೃತಪಟ್ಟಿದ್ದಾರೆ ಎಂದು ಶ್ರೀನಗರದ ರಕ್ಷಣಾ ವಕ್ತಾರ ಕರ್ನಲ್ ರಾಜೇಶ್ ಕಾಲಿಯಾ ತಿಳಿಸಿದ್ದಾರೆ. ಶೋಪಿಯಾನ್‌ನ ಕಿಲೂರ ಪ್ರದೇಶದಲ್ಲಿಯೂ ಶುಕ್ರವಾರ ಇಬ್ಬರು ಅಪರಿಚಿತ ಉಗ್ರರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ ಎಂದೂ ಪೊಲೀಸರು ತಿಳಿಸಿದ್ದಾರೆ.