ಜನಾರ್ದನ ಪೂಜಾರಿ ಅನಾರೋಗ್ಯದ ಸುಳ್ಳುಸುದ್ದಿ : ದೂರು ನೀಡಿದ ಹರಿಕೃಷ್ಣ ಬಂಟ್ವಾಳ್

ಮಂಗಳೂರು, ನವೆಂಬರ್ 27 : ಹಿರಿಯ ಕಾಂಗ್ರೆಸಿಗ  ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿಗೆ ಅನಾರೋಗ್ಯವೆಂದು ಸಾಮಾಜಿಕ ಜಾಲತಾಣಗಳಲ್ಲಿ  ಸುಳ್ಳು ಸುದ್ದಿ ಹಬ್ಬಿಸುವವರ ಮೇಲೆ ದೂರು ದಾಖಲು ಮಾಡಲಾಗಿದೆ. 

ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದ್ದು, ಜನಾರ್ದನ ಪೂಜಾರಿ ಅವರ ಆಪ್ತ , ಮಾಜಿ ಕಾಂಗ್ರೆಸಿಗ ಪ್ರಸ್ತುತ ಬಿಜೆಪಿ ಪಕ್ಷದ ವಕ್ತಾರರಾಗಿರುವ ಹರಿಕೃಷ್ಣ ಬಂಟ್ವಾಳ್ ಅವರು ಈ  ದೂರನ್ನು ನೀಡಿದ್ದು, ಬಂಟ್ವಾಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜನಾರ್ದನ ಪೂಜಾರ ಅವರು ಆರೋಗ್ಯದಿಂದಿದ್ದು, ಕೆಲ ಸ್ಥಾಪಿತ ಹಿತಾಸಕ್ತಿಗಳು ವ್ಯವಸ್ಥಿತವಾಗಿ ಪೂಜಾರಿ ಅವರ ಆರೋಗ್ಯ ಕುರಿತು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ.

ಇಂತಹ ವಿಘ್ನಸಂತೋಷಿಗಳ ಮೇಲೆ ಕಠಿಣ ಕ್ರಮಕ್ಕೆ ಬಂಟ್ವಾಳ್ ಅವರು ಆಗ್ರಹಿಸಿದ್ದಾರೆ.

ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಕೂಡ ಪೂಜಾರಿ ಅವರ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡಿಸುವುದನ್ನು ತೀವ್ರವಾಗಿ ಖಂಡಿಸಿದ್ದಾರೆ.

ಪೊಲೀಸ್ ಇಲಾಖೆ ಇಂತಹ ಕಿಡಿಗೇಟಿಗಳನ್ನು ಪತ್ತೆ ಹಚ್ಚಿ ಅವರ ಮೇಲೆ ಕಠಿಣ ಕ್ರಮ ಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.

Facebook Comments

comments