LATEST NEWS
ಮಮತಾ ಬ್ಯಾನರ್ಜಿ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿದ ಕಾಂಗ್ರೇಸ್ ಮುಖಂಡ ಬಿ. ಜನಾರ್ಧನ ಪೂಜಾರಿ

ಮಮತಾ ಬ್ಯಾನರ್ಜಿ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿದ ಕಾಂಗ್ರೇಸ್ ಮುಖಂಡ ಬಿ. ಜನಾರ್ಧನ ಪೂಜಾರಿ
ಮಂಗಳೂರು ಫೆಬ್ರವರಿ 4: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸತ್ಯಾಗ್ರಹಕ್ಕೆ ಕಾಂಗ್ರೇಸ್ ನ ಹಿರಿಯ ಮುಖಂಡ ಬಿ. ಜನಾರ್ಧನ ಪೂಜಾರಿ ಬೆಂಬಲ ಸೂಚಿಸಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ಪಶ್ಚಿಮ ಬಂಗಾಳದ ಪ್ರಜಾಪ್ರಭುತ್ವವನ್ನು ನಾಶ ಮಾಡಲು ಪ್ರಧಾನಿ ನರೇಂದ್ರ ಮೋದಿ ಪ್ರಯತ್ನಿಸುತ್ತಿದ್ದು, ಮೋದಿ ಈ ದೇಶಕ್ಕೆ ಶನಿಯಾಗಿದ್ದಾರೆ ಎಂದು ಹೇಳಿದರು.

ಮಮತಾ ಬ್ಯಾನರ್ಜಿ ಅವರಿಗೆ ಬೆಂಬಲವಾಗಿ ಸಂಜೆಯಿಂದ ಕುದ್ರೋಳಿಯಲ್ಲಿ ಉಪವಾಸ ಸತ್ಯಾಗ್ರಹ ಕೂರುತ್ತೇನೆ ಎಂದ ಪೂಜಾರಿಯವರು ನಂತರ ನಾಳೆ ಸುಪ್ರೀಂಕೋರ್ಟ್ ತೀರ್ಪಿನ ನಂತರ ಉಪವಾಸ ಕೂರುವುದಾಗಿ ಮಾತು ಬದಲಿಸಿದರು.
ರೋಸ್ ವ್ಯಾಲಿ ಹಾಗೂ ಶಾರದಾ ಚಿಟ್ ಫಂಡ ಹಗರಣದ ಹಿನ್ನಲೆಯಲ್ಲಿ ಪೊಲೀಸ್ ಆಯುಕ್ತ ರಾಜೀವ ಕುಮಾರ್ ಪರವಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿಂತಿದ್ದು, ನೀವು ಬೆಂಬಲ ನೀಡುವುದರಿಂದ ಭ್ರಷ್ಟಾಚಾರಕ್ಕೆ ಬೆಂಬಲ ನೀಡಿದಂತೆ ಅಲ್ಲವೇ ಎಂದು ಪತ್ರಕರ್ತರ ಪ್ರಶ್ನೆಗೆ ಪೂಜಾರಿ ಉತ್ತರ ನೀಡದೇ ಆಕ್ರೋಶ ವ್ಯಕ್ತಪಡಿಸಿದರು.