LATEST NEWS
ರಾಹುಲ್ ಗಾಂಧಿ ಎದುರು ಜನಾರ್ಧನ ಪೂಜಾರಿ ಕಣ್ಣೀರು
ರಾಹುಲ್ ಗಾಂಧಿ ಎದುರು ಜನಾರ್ಧನ ಪೂಜಾರಿ ಕಣ್ಣೀರು
ಮಂಗಳೂರು ಮಾರ್ಚ್ 20: ಕಾಂಗ್ರೆಸ್ ಯುವರಾಜ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ ಪೂಜಾರಿ ಅವರು ಕಣ್ನೀರು ಹಾಕಿದ ಘಟನೆ ರಾಹುಲ್ ಗಾಂಧಿ ಮಂಗಳೂರು ಭೇಟಿ ಸಂದರ್ಭದಲ್ಲಿ ನಡೆದಿದೆ.
ನೆಹರೂ ಮೈದಾನದಲ್ಲಿ ನಡೆದ ಜನಾಶೀರ್ವಾದ ಸಮಾವೇಶದ ನಂತರ ರಾಹುಲ್ ಗಾಂಧಿ ಶ್ರೀಗೋಕರ್ಣನಾಥ ದೇವಸ್ಥಾನಕ್ಕೆ ಭೇಟಿ ನೀಡಿದರು.
ಸಿಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಇನ್ನಿತರ ಮುಖಂಡರೊದಿಗೆ ದೇವಾಲಯಕ್ಕೆ ತೆರಳಿದ ರಾಹುಲ್ ಗಾಂಧಿ ಅವರನ್ನು ಕ್ಷೇತ್ರಕ್ಕೆ ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ಧನ ಪೂಜಾರಿ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಅನಾರೋಗ್ಯದಿಂದ ಬಳಲುತ್ತಿರುವ ಜನಾರ್ದನ ಪೂಜಾರಿ ಅವರಲ್ಲಿ ರಾಹುಲ್ ಗಾಂಧಿ ಆರೋಗ್ಯ ವಿಚಾರಿಸಿದರು.
ದೇವಾಲಯದಿಂದ ರಾಹುಲ್ ಗಾಂಧಿ ಹಿಂದಿರುಗುವಾಗ ರಾಹುಲ್ ಗಾಂಧಿ ಎದುರು ಜನಾರ್ದನ ಪೂಜಾರಿ ಕಣ್ಣೀರು ಹಾಕಿದರು.
ರಾಹುಲ್ ಕೆನ್ನೆ ಸವರಿ ಕಣ್ಣೀರಿಟ್ಟು ಗದ್ಗರಿತರಾದ ಪೂಜಾರಿ ಅವರನ್ನು ರಾಹುಲ್ ಗಾಂಧಿ ಸಂತೈಸಿದರು.
ಜನಾರ್ದನ ಪೂಜಾರಿಯನ್ನು ತಬ್ಬಿಕೊಂಡು ರಾಹುಲ್ ಗಾಂಧಿ ಸಮಾಧಾನ ಪಡಿಸಿದರು.
You must be logged in to post a comment Login