Connect with us

LATEST NEWS

ಜನವರಿ 23ರಂದು ಸುಳ್ಯದಲ್ಲಿ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರಿಂದ ಬೃಹತ್ ಜನತಾದರ್ಶನ

ಮಂಗಳೂರು,ಜನವರಿ 18: ಆರೋಗ್ಯ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಇದೇ ತಿಂಗಳ 23 ರಂದು ಸುಳ್ಯದಲ್ಲಿ ಬೃಹತ್ ಜನತಾ ದರ್ಶನ ಕಾರ್ಯಕ್ರಮ ಏರ್ಪಡಿಸಿದ್ದಾರೆ. ಸುಳ್ಯ ಕೆವಿಜಿ ಪುರಭವನದಲ್ಲಿ ನಡೆಯುವ ಈ ಜನತಾ ದರ್ಶನ ಕಾರ್ಯಕ್ರಮದಲ್ಲಿ ಜಿಲ್ಲೆಯ ಸಾರ್ವಜನಿಕರ ಕುಂದುಕೊರತೆ, ಅಹವಾಲುಗಳನ್ನು ಉಸ್ತುವಾರಿ ಸಚಿವರು ಸ್ವೀಕರಿಸಿ, ಪರಿಹಾರ ಒದಗಿಸಲು ವ್ಯವಸ್ಥೆ ಮಾಡಲಾಗಿದೆ.


ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಆಯೋಜಿಸಲಾಗುತ್ತಿರುವ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್‍ನಿಂದ ವ್ಯವಸ್ಥಿತವಾದ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ಸಂಬಂಧಿಸಿದ ಇಲಾಖೆಯ ಮುಖ್ಯಸ್ಥರು ಈ ದಿಸೆಯಲ್ಲಿ ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಈ ಜನತಾದರ್ಶನ ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದು, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲೇ ಸ್ಪಂದಿಸಲಾಗುವುದು.

ತಮ್ಮ ಅಹವಾಲುಗಳನ್ನು ಸಲ್ಲಿಸಲು ಆಗಮಿಸುವ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡಲು ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಹೆಲ್ಪ್‍ಡೆಸ್ಕ್ ತೆರೆದು, ಸಮಸ್ಯೆಗಳನ್ನು ಇಲಾಖಾವಾರು ಹಂಚಲಾಗುವುದು. ಸಾರ್ವಜನಿಕರು ನೀಡಿದ ಅರ್ಜಿಯನ್ನು ಪಡೆಯಲು ವಿವಿಧ ಇಲಾಖೆಗಳಿಗಾಗಿ ಸ್ಥಳದಲ್ಲಿಯೇ ಕಳುಹಿಸಲಾಗುವುದು. ನಂತರ ಸಾರ್ವಜನಿಕರು ತಮ್ಮ ಸಮಸ್ಯೆ/ಅಹವಾಲುಗಳನ್ನು ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಲ್ಲಿಸಿ ಅವರಿಗೆ ಮೌಖಿಕವಾಗಿ ತಿಳಿಸಲು ವ್ಯವಸ್ಥೆ ಮಾಡಲಾಗುವುದು. ಸಮಸ್ಯೆಗಳನ್ನು ನಿಗದಿತ ಸಮಯದೊಳಗೆ ಇತ್ಯರ್ಥ ಪಡಿಸಬೇಕಾಗುತ್ತದೆ. ಈ ಕುರಿತು ಸಾರ್ವಜನಿಕರಿಗೆ ನೀಡಿದ ಹಿಂಬರಹದ ಅನುಪಾಲನಾ ವರದಿಯನ್ನು ಸಲ್ಲಿಸಲಿದ್ದಾರೆ. ಸಾರ್ವಜನಿಕರು ಈ ಜನತಾದರ್ಶನದ ಅವಕಾಶವನ್ನು ಬಳಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಯವರು ತಿಳಿಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *