Connect with us

LATEST NEWS

ಜಾರ್ಖಂಡ್ ನಲ್ಲಿ ಪೆಟ್ರೋಲ್ ಪ್ರತಿ ಲೀಟರ್ ಗೆ 25 ರೂಪಾಯಿ ಕಡಿತ

ರಾಂಚಿ: ಪೆಟ್ರೋಲ್ ಬೆಲೆಯಿಂದ ಸಂಕಷ್ಟದಲ್ಲಿರುವ ಜನಸಾಮಾನ್ಯರಿಗೆ ಜಾರ್ಖಂಡ್ ಸರಕಾರ ಸಿಹಿ ಸುದ್ದಿ ನೀಡಿದೆ. ಸಹಾಯಧನ ನೀಡುವ ಮೂಲಕ ದ್ವಿಚಕ್ರ ವಾಹನಗಳಿಗೆ ಪೆಟ್ರೋಲ್ ದರದಲ್ಲಿ ಪ್ರತಿ ಲೀಟರ್‌ಗೆ ₹25ರಷ್ಟು ಕಡಿತ ಮಾಡಲು ನಿರ್ಧರಸಿದೆ.


ಈ ಕುರಿತಂತೆ ಮಾಹಿತಿ ನೀಡಿದ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಈ ದರ ಕಡಿತವು 2022ರ ಜನವರಿ 26ರಿಂದ ಅನ್ವಯವಾಗಲಿದೆ ಎಂದು ಅವರು ತಿಳಿಸಿದ್ದಾರೆ. ಈ ವಿಚಾರವಾಗಿ ಜಾರ್ಖಂಡ್ ಮುಖ್ಯಮಂತ್ರಿಗಳ ಕಾರ್ಯಾಲಯ ಟ್ವೀಟ್ ಮಾಡಿದ್ದು,

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದ್ದು ಬಡವರು, ಮಧ್ಯಮ ವರ್ಗದ ಜನರು ಹೆಚ್ಚು ತೊಂದರೆಗೀಡಾಗಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರವು ದ್ವಿಚಕ್ರ ವಾಹನಗಳಿಗೆ ಪ್ರತಿ ಲೀಟರ್ ಪೆಟ್ರೋಲ್‌ ದರದಲ್ಲಿ ₹25ರಷ್ಟು ಸಹಾಯಧನ ನೀಡಲು ನಿರ್ಧರಿಸಿದೆ. 2022ರ ಜನವರಿ 26ರಿಂದ ಇದರ ಪ್ರಯೋಜನ ದೊರೆಯಲಿದೆ’ ಎಂದು ಉಲ್ಲೇಖಿಸಿದ್ದಾರೆ.

Advertisement
Click to comment

You must be logged in to post a comment Login

Leave a Reply