ಬೆಳ್ತಂಗಡಿ ನವೆಂಬರ್ 16: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎಸ್ ಐಟಿ ಅಧಿಕಾರಿಗಳು ವಿಚಾರಣೆ ವೇಳೆ ಹಲ್ಲೆ ನಡೆಸಿದ್ದಾರೆ ಎಂದು ಜಯಂತ್ ಟಿ ಅವರು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಎಸ್ಐಟಿ ಅಧಿಕಾರಿಗಳಾದ ಜಿತೇಂದ್ರ ದಯಾಮ, ಎಸ್.ಪಿ. ಸೈಮನ್, ಡಿವೈಎಸ್ಪಿ ಆರ್ ಜಿ. ಮಂಜುನಾಥ, ಇನ್ಸೆಕ್ಟರ್ ಮಂಜುನಾಥ ಗೌಡ, ಸಬ್ ಇನ್ಸ್ಪೆಕ್ಟರ್ ಗುಣಪಾಲ್ ವಿರುದ್ಧ ಸೌಜನ್ಯ ಪರ ಹೋರಾಟಗಾರ ಟಿ ಜಯಂತ್ ದೂರು ನೀಡಿದ್ಧಾರೆ.
ಇದನ್ನೂ ಓದಿ – ಕೇರಳ – ಸ್ಥಳೀಯ ಸಂಸ್ಥೆ ಚುನಾವಣೆಗೆ ಟಿಕೆಟ್ ನೀಡಿಲ್ಲ ಎಂದು ಆತ್ಮಹತ್ಯೆಗೆ ಶರಣಾದ ಆರ್ ಎಸ್ಎಸ್ ಕಾರ್ಯಕರ್ತ
ವಿಚಾರಣೆ ಸಂದರ್ಭದಲ್ಲಿ ದೈಹಿಕ ಹಲ್ಲೆ, ಪ್ರಾಣ ಬೆದರಿಕೆ, ಅಪರಾಧಿಕ ಪಿತೂರಿ, ಸುಳ್ಳು ಸಾಕ್ಷಿ ಹೇಳುವಂತೆ ಒತ್ತಾಯ ಹೇರಲಾಗಿದೆ. ಅಲ್ಲದೆ ಕಾನೂನು ಬಾಹಿರ ಕೃತ್ಯಗಳು, ಸರಕಾರಿ ಆದೇಶ ಪಾಲನೆ ಮಾಡದೆ ಕರ್ತವ್ಯ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ. ಪೊಲೀಸರು ಈ ಬಗ್ಗೆ ಕಾನೂನು ಸಲಹೆ ಪಡೆದುಕೊಂಡು ಮುಂದಿನ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಎಸ್ಐಟಿ ಅಧಿಕಾರಿಗಳು ತನ್ನನ್ನು ವಿಚಾರಣೆಗೆಂದು ಕರೆದು ತನ್ನ ಮೇಲೆ ಹಲ್ಲೆ ನಡೆಸಿದ್ದಲ್ಲದೆ, ಬೆದರಿಕೆ ಹಾಕಿರುವುದಾಗಿ ರಾಜ್ಯಪಾಲ ಹಾಗೂ ಪೊಲೀಸ್ ಮಹಾ ನಿರ್ದೇಶಕರಿಗೂ ಜಯಂತ್ ದೂರು ನೀಡಿದ್ದರು.