LATEST NEWS
ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ದ ದೇವರ ಮೊರೆ ಹೊದ ಬಿಜೆಪಿ ಕಾರ್ಯಕರ್ತರು

ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ದ ದೇವರ ಮೊರೆ ಹೊದ ಬಿಜೆಪಿ ಕಾರ್ಯಕರ್ತರು
ಉಡುಪಿ ಮಾರ್ಚ್ 14: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಟಿಕೆಟ್ ಪೈಟ್ ಈಗ ದೇವಸ್ಥಾನದ ಮೆಟ್ಟಿಲೇರಿದೆ. ಹಾಲಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ದ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಅಸಮಧಾನಗೊಂಡಿದ್ದು, ಇಂದು ಉಡುಪಿ ಕೃಷ್ಣಮಠದಲ್ಲಿ ಬಿಜೆಪಿ ಕಾರ್ಯಕರ್ತರು ಜಯಪ್ರಕಾಶ್ ಹೆಗ್ಡೆ ಅಭ್ಯರ್ಥಿಯಾಗಿ ಆಯ್ಕೆಯಾಗಬೇಕೆಂದು ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಗೊಂದಲ ಮುಂದುವರೆಯುತ್ತಿದ್ದ ಹಾಗೆ, ಕಾರ್ಯಕರ್ತರು ಜಯಪ್ರಕಾಶ್ ಹೆಗ್ಡೆ ಅಭ್ಯರ್ಥಿಯಾಗಿ ಆಯ್ಕೆಯಾಗಬೇಕೆಂದು ದೇವರ ಮೊರೆ ಹೋಗಿದ್ದಾರೆ.

ಹಾಲಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ದ ಆಕ್ರೋಶಗೊಂಡಿರುವ ಕಾರ್ಯಕರ್ತರು ಜಯಪ್ರಕಾಶ್ ಹೆಗ್ಡೆಗೆ ಟಿಕೆಟ್ ನೀಡಿದ್ರೆ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಲು ಅನುಕೂಲವಾಗಲಿದ್ದು, ಜನರ ಜೊತೆಯಿರುವ ನಾಯಕ ಜಯಪ್ರಕಾಶ್ ಹೆಗ್ಡೆಗೆ ಟಿಕೆಟ್ ಸಿಗಬೇಕು ಎಂದು ದೇವರಲ್ಲಿ ಮೊರೆ ಇಟ್ಟಿದ್ದಾರೆ. ಉಡುಪಿ- ಚಿಕ್ಕಮಗಳೂರು ಕ್ಷೇತ್ರಕ್ಕೆ ಜಯಪ್ರಕಾಶ್ ಹೆಗ್ಡೆ ಅಭ್ಯರ್ಥಿಯಾಗಬೇಕು ಮತ್ತು ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಬೇಕು ಎಂದು ಶ್ರೀಕೃಷ್ಣ ಮುಖ್ಯಪ್ರಾಣ ದೇವರಲ್ಲಿ ಪ್ರಾರ್ಥನೆ ನಡೆಸಿದ್ದಾರೆ.
ಈ ಮೊದಲು ಹಾಲಿ ಸಂಸದೆ ಶೋಭಾ ವಿರುದ್ದ ಗೋ ಬ್ಯಾಕ್ ಅಭಿಯಾನವನ್ನು ಬಿಜೆಪಿ ಕಾರ್ಯಕರ್ತರು ನಡೆಸಿದ್ದರು. ಜನರ ಕೈಗೆ ಸಿಗದೇ ಇದ್ದ ಸಂಸದೆ ವಿರುದ್ಧ ಸ್ವಪಕ್ಷೀಯರಲ್ಲೇ ಅಸಮಾಧಾನದ ಹೊಗೆಯಾಡಿತ್ತು. ಈ ಹಿನ್ನಲೆಯಲ್ಲಿ ಈ ಬಾರಿಯ ಪಕ್ಷದ ಟಿಕೆಟ್ ಜಯಪ್ರಕಾಶ್ ಹೆಗ್ಡೆಗೆ ನೀಡುವಂತೆ ಹೈಕಮಾಂಡ್ ಗೆ ಆಗ್ರಹಿಸಿದ್ದಾರೆ.